Grace Mark issue | 10ನೇ ತರಗತಿಗೆ ಈ ಬಾರಿ ಕೃಪಾಂಕ ಇಲ್ಲ: ಸಚಿವ ಮಧು ಬಂಗಾರಪ್ಪ

ಈ ವರ್ಷ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ರಾಜ್ಯದ ಒಟ್ಟಾರೆ ಫಲಿತಾಂಶ ಶೇ.73.40 ಆಗಿದೆ. ಕಳೆದ ವರ್ಷ ಶೇ.83 ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ 2288 ಶಾಲೆಗಳು ಶೇ100 ರಷ್ಟು ಫಲಿತಾಂಶ ಪಡೆದಿವೆ.;

Update: 2024-10-09 12:17 GMT
ಶಿಕ್ಷಣ ಸಚಿವ ಮಧು ಬಂಗಾರಪ್ಪ
Click the Play button to listen to article

10ನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಕೃಪಾಂಕ (ಗ್ರೇಸ್​ ಮಾರ್ಕ್ಸ್)​​ ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 

ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರೇಸ್ ಮಾರ್ಕ್ಸ್ ಕೊಡಬೇಡಿ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ಮಕ್ಕಳಿಗೆ ಗ್ರೇಸ್​ ಮಾರ್ಕ್ಸ್​​ ನೀಡುವುದಿಲ್ಲ ಎಂದರು.

ಈ ವರ್ಷ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ರಾಜ್ಯದ ಒಟ್ಟಾರೆ ಫಲಿತಾಂಶ ಶೇ.73.40 ಆಗಿದೆ. ಕಳೆದ ವರ್ಷ ಶೇ.83 ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ 2288 ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿವೆ ಎಂದು ಅವರು ಮಾಹಿತಿ ನೀಡಿದರು.

ಶಾಲಾ ಶಿಕ್ಷಣ ಇಲಾಖೆ ಈ ವರ್ಷ 1.70 ಲಕ್ಷ 10ನೇ ತರಗತಿ ಮಕ್ಕಳಿಗೆ ಶೇ.20 ರಷ್ಟು ಕೃಪಾಂಕ ನೀಡಿತ್ತು. ಆದರೂ ಕೂಡ ಕಳೆದ ವರ್ಷಕ್ಕಿಂತ ಈ ವರ್ಷ ಶೇ.10 ರಷ್ಟು ಕುಸಿತವಾಗಿದೆ. ಈ ಕೃಪಾಂಕ ನೀಡಿದ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ಕೃಪಾಂಕ ನೀಡಿದ್ದು ಅನುತ್ತೀರ್ಣಗೊಳ್ಳುವ ಅಂಚಿನಲ್ಲಿದ್ದ ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಶೇ.5-10ರಷ್ಟು ಕೃಪಾಂಕ ನೀಡುತ್ತಿದ್ದ ಮಂಡಳಿಯು ಈ ವರ್ಷ ಇದರ ಪ್ರಮಾಣವನ್ನು ಶೇ.20 ಕ್ಕೆ ಹೆಚ್ಚಳ ಮಾಡಿತ್ತು.

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶೇ.20 ರಷ್ಟು ಕೃಪಾಂಕ ನೀಡಿದ್ದ ಶಿಕ್ಷಣ ಇಲಾಖೆ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದರು. ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕತೆ ಹಾಗೂ ಶಿಕ್ಷಣ ಗುಣಮಟ್ಟ ಕುಸಿತಕ್ಕೆ ಕಾರಣವಾಗುವ ಕೃಪಾಂಕ ವ್ಯವಸ್ಥೆಯನ್ನು ಮುಂದುವರಿಸದಂತೆ ಸ್ಪಷ್ಟ ನಿರ್ದೇಶನ ನೀಡಿದ್ದರು.

Tags:    

Similar News