ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಮತ್ತಿಬ್ಬರು ಪೊಲೀಸ್‌ ವಶಕ್ಕೆ, ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

ಬಂಧಿತರನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸುಜನ್ ಶೆಟ್ಟಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಎ.ಎಲ್. ಆದರ್ಶ್ ಎಂದು ಗುರುತಿಸಲಾಗಿದೆ.;

Update: 2025-08-19 07:12 GMT

ನಟಿ ರಮ್ಯಾ 

ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿ ನಿಂದಿಸಿದ ಪ್ರಕರಣದಲ್ಲಿ ನಟ ದರ್ಶನ್ ಅವರ ಮತ್ತಿಬ್ಬರು ಅಭಿಮಾನಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿದೆ. ಬಂಧಿತರನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸುಜನ್ ಶೆಟ್ಟಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಎ.ಎಲ್. ಆದರ್ಶ್ ಎಂದು ಗುರುತಿಸಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯ ಬಗ್ಗೆ ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್‌ಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳುಹಿಸಿದ್ದರು.

ನಟಿ ರಮ್ಯಾ ಸ್ಪಷ್ಟನೆ

ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ನಟಿ ರಮ್ಯಾ, ಸಾಮಾಜಿಕ ಜಾಲತಾಣದಲ್ಲಿ ಕೆಲವರು ನನಗೆ ಅಶ್ಲೀಲ ಸಂದೇಶ ಕಳಿಸಿದ್ದರು. ಅವುಗಳನ್ನು ಓದಲು ಸಾಧ್ಯವಿರಲಿಲ್ಲ. ಮುಂದಿನ ದಿನಗಳಲ್ಲಿ ಯಾವ ಹೆಣ್ಣುಮಕ್ಕಳಿಗೂ ಈ ರೀತಿ ಅಶ್ಲೀಲ ಸಂದೇಶಗಳನ್ನು ಕಳಿಸಬಾರದು ಎಂಬ ಉದ್ದೇಶದಿಂದ ನಾನು ದೂರು ನೀಡಿದ್ದೆ. ಸಾಮಾಜಿಕ ಜಾಲತಾಣಗಳಲ್ಲಿ ಈಗ ಅಂತಹ ಸಂದೇಶಗಳು ಬರುತ್ತಿಲ್ಲ ಎಂದು ತಿಳಿಸಿದರು. 


Tags:    

Similar News