ಓಲಾ, ಉಬರ್ ಸೇವೆ ಬಂದ್ |ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಸಾರಿಗೆ ಸಚಿವರು ಉಬರ್, ಓಲಾ ಟ್ಯಾಕ್ಸಿ ಸೇವೆ ನಿಲ್ಲಿಸುವಂತೆ ಸೂಚಿಸಿ ಸಾರಿಗೆ ಇಲಾಖೆಯ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ, ಸುರಕ್ಷತೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.;
ರಾಜ್ಯಾದ್ಯಂತ ಉಬರ್, ರಾಪಿಡೋ ಬೈಕ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಏ.2ರಂದು ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸೇವೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ, 3 ತಿಂಗಳ ಒಳಗಾಗಿ ಮಾರ್ಗಸೂಚಿ ಹೊರಡಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಪತ್ರ ಆಧರಿಸಿ ಸರ್ಕಾರ ಈ ಆದೇಶ ಹೊರಡಿಸಿದೆ.
ಸಾರಿಗೆ ಸಚಿವರು ಉಬರ್, ಓಲಾ ಟ್ಯಾಕ್ಸಿ ಸೇವೆ ನಿಲ್ಲಿಸುವಂತೆ ಸೂಚಿಸಿ ಸಾರಿಗೆ ಇಲಾಖೆಯ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ, ಸುರಕ್ಷತೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಸರ್ಕಾರ ಮೋಟಾರು ವಾಹನ ಕಾಯ್ದೆ, 1988ರ ಸೆಕ್ಷನ್ 3ರಡಿ ಮಾರ್ಗಸೂಚಿ ರೂಪಿಸುವವರೆಗೆ ಬೈಕ್ ಟ್ಯಾಕ್ಸಿಗಳು ಕಾರ್ಯನಿರ್ವಹಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿತ್ತು. ಮುಂದಿನ 6 ವಾರಗಳ ಒಳಗಾಗಿ ರಾಜ್ಯದಲ್ಲಿರುವ ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿರ್ಬಂಧಿಸುವಂತೆ ಸರ್ಕಾರಕ್ಕೆ ಆದೇಶ ನೀಡಿತ್ತು. ಅಲ್ಲದೇ ರ್ಯಾಪಿಡೋ, ಓಲಾ, ಉಬರ್ ಸೇರಿ ಇತರೆ ಎಲ್ಲಾ ಬೈಕ್ ಟ್ಯಾಕ್ಸಿಗಳ ಸೇವೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ, ಇದಕ್ಕೆ ಸಂಬಂಧಿಸಿ 3 ತಿಂಗಳ ಒಳಗಾಗಿ ಮಾರ್ಗಸೂಚಿ ಹೊರಡಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು.
ಸರ್ಕಾರ ಸೂಕ್ತ ನಿಯಮಗಳನ್ನು ಜಾರಿ ಮಾಡುವವರೆಗೆ ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅಥವಾ ಅಂತಹ ಸೇವೆಗಳಿಗೆ ಪರವಾನಗಿ ನೀಡಲು ಸಾರಿಗೆ ಇಲಾಖೆ ಅನುಮತಿ ನೀಡಬಾರದು ಎಂದು ಕೋರ್ಟ್ ಸೂಚಿಸಿತ್ತು.
ರಾಪಿಡೋ ಸೇರಿ ಹಲವು ಕಂಪನಿಗಳು ಯಲ್ಲೋ ಬೋರ್ಡ್ ಇಲ್ಲದೇ ಅಕ್ರಮವಾಗಿ ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿವೆ. ನಿಯಮಬಾಹಿರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಬೈಕ್ ಟ್ಯಾಕ್ಸಿ ಕಂಪನಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಟೋ ಹಾಗೂ ಕ್ಯಾಬ್ ಚಾಲಕರು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದರು. ಇದೀಗ ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ತಾತ್ಕಾಲಿಕ ನಿರ್ಬಂಧವನ್ನು ವಿಧಿಸಿದೆ.