ವಿಧಾನಸಭಾ ಅಧಿವೇಶನದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿಪಿ- ಟಿಎಸ್ಪಿ ಹಣ ಬಳಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ವಾದ-ಚರ್ಚೆ ನಡೆಯಿತು. ಬಿಜೆಪಿ ಶಾಸಕರಾದ ಸುನೀಲ್ ಕುಮಾರ್, ಚಂದ್ರಪ್ಪ, ಆರ್.ಅಶೋಕ್, ಆರಗ ಜ್ಞಾನೇಂದ್ರ ಸೇರಿದಂತೆ ಹಲವು ಮಂದಿ, ದಲಿತರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ತಿರುಗಿಸಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಎಸ್ಸಿಪಿ, ಟಿಎಸ್ಪಿಯ 13,500 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಲಾಗಿದೆ. ಬಸ್ಸಿನಲ್ಲಿ ಹೋಗುವವರಿಗೆ ಹೇಗೆ ದಲಿತರು ಎಂದು ಗುರುತಿಸಿದ್ದೀರಿ?, ಇದು ಯೋಜನೆ ಹಳ್ಳ ಹಿಡಿಸುವಂತಾಗಿದೆ, ದಲಿತರಿಗೆ ಅನ್ಯಾಯ ಮಾಡಿದ್ದೀರಿ ಎಂದು ಸುನೀಲ್ ಕುಮಾರ್ ಆರೋಪಿಸಿದರು. ಆರ್. ಅಶೋಕ್ ಮಾತನಾಡಿ, “ಕಳೆದ ಎರಡು ವರ್ಷಗಳಲ್ಲಿ ತಪ್ಪು ಆಗಿದೆ ಎಂದರೆ ಕ್ಷಮಿಸೋಣ, ಆದರೆ, ಇದೀಗ ನಡೆಯುತ್ತಿರುವುದು ನೇರ ಅನ್ಯಾಯ. ದಲಿತರ ಹಣವನ್ನು ನುಂಗುತ್ತಿದ್ದೀರಿ. ಗ್ಯಾರಂಟಿ ಯೋಜನೆಗಳು ವಾರೆಂಟಿಯಾಗಿವೆ. ದಲಿತ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲು ಎಷ್ಟು ಧೈರ್ಯ" ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಚಂದ್ರಪ್ಪ ಮಾತನಾಡಿ, “ಎಸ್ಸಿಪಿ–ಟಿಎಸ್ಪಿಗೆ 42 ಸಾವಿರ ಕೋಟಿ ಹಣ ಮೀಸಲಿಟ್ಟಿದ್ದೀರಾ, ಆದರೆ, ಬಿಡುಗಡೆ ಮಾಡಿದ್ದು ಕೇವಲ 8,459 ಕೋಟಿ. ಉಳಿದ ಹಣವನ್ನು ಎಲ್ಲಿ ಖರ್ಚು ಮಾಡಿದ್ದೀರಿ? ಸಮಾಜಕ್ಕೆ ಇದು ಮೋಸವಲ್ಲವೇ" ಎಂದು ಪ್ರಶ್ನಿಸಿದರು.ಜೆಡಿಎಸ್ ಶಾಸಕ ಸುರೇಶ್ ಬಾಬು ಕೂಡ ಬಿಜೆಪಿ ಸದಸ್ಯರ ಹೇಳಿಕೆಗೆ ದನಿಗೂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ ಪ್ರತಿಕ್ರಿಯಿಸಿ, ಶಾಸಕ ಚಂದ್ರಪ್ಪ ಹೇಳಿದ್ದು ಸರಿಯಾಗಿದೆ. ಈ ವರ್ಷ ಎಂಟು ಸಾವಿರ ಕೋಟಿ ರೂ.ಮಾತ್ರ ಖರ್ಚಾಗಿದೆ, ಉಳಿದ ಹಣವನ್ನು ಕಾಯ್ದೆಯಡಿಯಲ್ಲಿಯೇ ಬೇರೆ ಯೋಜನೆಗಳಿಗೆ ಬಳಸಿದ್ದೇವೆ. ಪರಿಶಿಷ್ಟ ಜಾತಿ ಜನರಿಗೆ ಅನಕೂಲವಾಗಲೆಂದೇ ನೀಡಲಾಗಿದೆ” ಎಂದರು.ಎಸ್ಸಿಪಿ-ಟಿಎಸ್ಪಿ ಕಾಯ್ದೆಯ ಸೆಕ್ಷನ್ 7 (ಸಿ) ಅಡಿ ಇತರ ಯೋಜನೆಗಳಿಗೆ ಹಣ ವರ್ಗಾಯಿಸಲು ಅವಕಾಶವಿದೆ ಸಚಿವ ಮಹದೇವಪ್ಪ ಸ್ಪಷ್ಟಪಡಿಸಿದರು.ಸಚಿವರ ಉತ್ತರಕ್ಕೆ ತೃಪ್ತರಾಗದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಸುರೇಶ್ ಗೌಡ ಮಾತನಾಡಿ, “ಅಂಬೇಡ್ಕರ್ ಬಗ್ಗೆ ನೀವು ಸದನದಲ್ಲಿ ಮಾತನಾಡುತ್ತೀರಾ, ಆದರೆ, ಅವರ ತತ್ವಗಳಿಗೆ ವಿರುದ್ಧವಾಗಿ ದಲಿತರಿಗೆ ಮೀಸಲಾದ ಹಣವನ್ನು ಬೇರೆಡೆ ಬಳಸುತ್ತಿದ್ದೀರಾ” ಎಂದು ವಾಗ್ದಾಳಿ ನಡೆಸಿದರು.