Assembly Session | ರಾಜಣ್ಣ ವಜಾ: ಸಿಎಂ ಸ್ಪಷ್ಟನೆಗೆ ಪ್ರತಿಪಕ್ಷಗಳ ಪಟ್ಟು

ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿದ್ದು ಏಕೆ?, ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನಕ್ಕೆ ಸ್ಪಷ್ಟನೆ ನೀಡಬೇಕು ಎಂದು ಅಶೋಕ್‌ ಆಗ್ರಹಿಸಿದರು.;

Update: 2025-08-12 05:39 GMT
ಯು.ಟಿ.ಖಾದರ್‌

ಕೆ.ಎನ್‌.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿದ ವಿಚಾರವು ಮಂಗಳವಾರ ವಿಧಾನಸಭೆ ಕಲಾಪದಲ್ಲಿ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ಮಧ್ಯೆ ವಾಗ್ವಾದಕ್ಕೆ ಕಾರಣವಾಯಿತು. 

ಕಲಾಪ ಆರಂಭವಾಗುತ್ತಲೇ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಅವರು ವಿಷಯ ಪ್ರಸ್ತಾಪಿಸಿ, ಸಿಎಂ ಅವರಿಂದ ಉತ್ತರ ಕೋರಿದರು. ಕಾನೂನು ಸಚಿವ ಎಚ್‌.ಕೆ. ಪಾಟೀಲರು ಏನೂ ಆಗಿಯೇ ಇಲ್ಲಎಂದು ಹೇಳುತ್ತಿದ್ದಾರೆ. ಹಾಗಾದರೆ ಅಧಿವೇಶನ ನಡೆಯುವ ಸಂದರ್ಭದಲ್ಲೇ ಏಕಾಏಕಿ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿದ್ದು ಏಕೆ?,  ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನಕ್ಕೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು, "ಸಿಎಂ ಬಂದ ನಂತರ ವಿಷಯ ಪ್ರಸ್ತಾಪಿಸಲಾಗುವುದು" ಎಂದು ತಿಳಿಸಿದರೂ ಪ್ರತಿಪಕ್ಷ ಸದಸ್ಯರು ಕಿವಿಗೊಡಲಿಲ್ಲ. ಸಿಎಂ ಬಂದ ನಂತರ ಮಾತ್ರ ಅಧಿವೇಶನ ನಡೆಸಬೇಕೆ? ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

"ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ರಾಜಣ್ಣ ಅವರೇ ಹೇಳಿಕೊಂಡಿದ್ದಾರೆ. ಅವರ ವಿರುದ್ಧ ನಡೆದಿರುವ ಷಡ್ಯಂತ್ರ್ಯ ಏನು ಎಂಬುದನ್ನು ಸಿಎಂ ಸಿದ್ದರಾಮಯ್ಯ ಅವರು ಸದನದ ಮುಂದಿಡಬೇಕು ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಒತ್ತಾಯಿಸಿದರು.

Tags:    

Similar News