ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಎರಡು ದಿನ ಭಾರಿ ಮಳೆ​ ಸಾಧ್ಯತೆ

ಕರ್ನಾಟಕದ ಮಲೆನಾಡು ಜಿಲ್ಲೆಗಳು & ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ.

Update: 2024-08-16 06:13 GMT
ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Click the Play button to listen to article

ಕರ್ನಾಟಕದ ಮಲೆನಾಡು ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ. 

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆರಂಭ ಆಗಲಿದೆ. ಮಲೆನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಸೇರಿ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಭಾರಿ ಭರ್ಜರಿ ಮಳೆ ಬೀಳಲಿದೆ. ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯು ಸೇರಿದಂತೆ ಹುಬ್ಬಳ್ಳಿ & ಧಾರವಾಡ ಸುತ್ತಮುತ್ತಲ ಭಾಗದಲ್ಲಿ ಭಾರಿ ಭರ್ಜರಿ ಮಳೆ ಎಂಟ್ರಿ ಆಗಲಿದೆ. ಮುಂದಿನ 5 ದಿನಗಳ ಕಾಲ ಇದೇ ರೀತಿ ಮಳೆ ಆಗುವ ಮುನ್ಸೂಚನೆ ಇದೆ. ಹಾಗೇ ಬಹುತೇಕ ಕರ್ನಾಟಕದಲ್ಲಿ ಮುಂದಿನ 5 ದಿನ ಇದೇ ರೀತಿಯಾಗಿ ಭರ್ಜರಿ ಮಳೆ ಸುರಿಯುವ ಸೂಚನೆ ಇದೆ. 

ಮುಂಗಾರು ಮಳೆಯ ಆರ್ಭಟಕ್ಕೆ ಈಗಾಗಲೇ ಬೆಂಗಳೂರು ಬೆಚ್ಚಿಬಿದ್ದಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಹಗಲಿನಲ್ಲಿ ಭಾಗಶ: ಮೋಡ ಕವಿದ ವಾತಾವರಣವಿದ್ದು, ಮತ್ತೆ ಮುಂದಿನ ಕೆಲ ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದ್ದು,  ಸಂಜೆ ಸಮಯದಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ದಟ್ಟವಾಗಿದೆ.

Tags:    

Similar News