ಪಾಕಿಸ್ತಾನ ಪರ ಘೋಷಣೆ ದೃಢ: ನಾಸಿರ್ ಹುಸೇನ್ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ನಾಸಿರ್ ಹುಸೇನ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.;
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ನಾಸಿರ್ ಹುಸೇನ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದು ವಿಧಿವಿಜ್ಞಾನ ಪ್ರಯೋಗಾಲಯ ( ಎಫ್ ಎಸ್ ಎಲ್) ವರದಿಯಲ್ಲಿ ಸಾಬೀತಾಗಿದೆ. ನಾಸಿರ್ ಹುಸೇನ್ ಗೆಲುವು ಸಾಧಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಈ ರೀತಿ ಘೋಷಣೆ ಕೂಗಿದ್ದಾರೆ. ಈ ನಿಟ್ಟಿನಲ್ಲಿ ಅವರನ್ನೇ ಪ್ರಮುಖ ಆರೋಪಿಯನ್ನಾಗಿ ಮಾಡಬೇಕು ಎಂದು ಮಂಗಳವಾರ ಬಿಜೆಪಿ ನಾಯಕರ ನಿಯೋಗ ವಿಧಾನಸೌಧ ಪೊಲೀಸ್ ಠಾಣೆಗೆ ತೆರಳಿ ಮನವಿ ಸಲ್ಲಿಸಿದೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದು, ರಾಜ್ಯದಲ್ಲಿ ಬಹಳಷ್ಟು ಚರ್ಚೆಗೆ ಕಾರಣವಾಗಿತ್ತು. ಇದೀಗ ಅಧಿಕೃತವಾಗಿ ಸರ್ಕಾರದ ಎಫ್ ಎಸ್ ಎಲ್ ವರದಿಯಲ್ಲಿ ಘೋಷಣೆ ಕೂಗಿರುವುದು ಸಾಬೀತಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ನಾಸಿರ್ ಹುಸೇನ್ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹಿಸಿದೆ.