IPL 2024: ಆರ್​ಸಿಬಿ vs ಗುಜರಾತ್ ಪಂದ್ಯ; ಈ ಸಂಚಾರ ಸಲಹೆಗಳನ್ನು ಕಡ್ಡಾಯ ಪಾಲಿಸಿ

ಪಂದ್ಯ ವೀಕ್ಷಿಸಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳ ಕೊರತೆ ಇರುವುದರಿಂದ ಬಿಎಂಟಿಸಿ,‌ ಮೆಟ್ರೋ ಬಳಸಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.;

Update: 2025-04-01 08:39 GMT

ಚಿನ್ನಸ್ವಾಮಿ ಸ್ಟೇಡಿಯಂ 

Click the Play button to listen to article

ಬುಧವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಲಿದೆ. ಇದು ಪ್ರಸಕ್ತ ವರ್ಷದ ಬೆಂಗಳೂರಿನಲ್ಲಿ ನಡೆಯುವ ಮೊದಲ ಪಂದ್ಯವಾಗಿದೆ. ಹೀಗಾಗಿ  ಬೆಂಗಳೂರು ಟ್ರಾಫಿಕ್ ಪೊಲೀಸರು ಯಾವುದೇ ರೀತಿಯ ಅವ್ಯವಸ್ಥೆ ಉಂಟಾಗದಂತೆ  ಸಿದ್ಧತೆ ಮಾಡಿಕೊಂಡಿದ್ದಾರೆ. ವಾಹನ ನಿಲುಗಡೆ, ವಾಹನ ನಿಲುಗಡೆ ನಿಷೇಧ ವಿವರವನ್ನು ಹಂಚಿಕೊಂಡಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್

ಸ್ಟೇಡಿಯಂ ಸುತ್ತಮುತ್ತ ಸಂಚಾರ ದಟ್ಟಣೆ ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬುಧವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ. ಪಂದ್ಯ ವೀಕ್ಷಿಸಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳ ಕೊರತೆ ಇರುವುದರಿಂದ ಬಿಎಂಟಿಸಿ,‌ ಮೆಟ್ರೋ ಬಳಸಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್ ಆಪ್ ಮತ್ತು ಡ್ರಾಪ್ ಮಾಡಲು ಸ್ಥಳ ನಿಗದಿಪಡಿಸಲಾಗಿದೆ.

ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ?

  • ಕ್ವೀನ್ಸ್ ರಸ್ತೆಯಲ್ಲಿ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ ಪಾರ್ಕಿಂಗ್ ನಿಷೇಧಿಸಲಾಗಿದೆ.
  • ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
  • ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆವರೆಗೆ ನೋ ಪಾರ್ಕಿಂಗ್ ಇರಲಿದೆ.
  • ರಾಜಭವನ ರಸ್ತೆಯ ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ ಪಾರ್ಕಿಂಗ್​ಗೆ ಅನುಮತಿ ಇಲ್ಲ.
  • ಸೆಂಟ್ರಲ್ ಸ್ಟ್ರಿಟ್ ರಸ್ತೆಯ ಎರಡೂ ಕಡೆ ನೋ ಪಾರ್ಕಿಂಗ್.
  • ಕಬ್ಬನ್ ರಸ್ತೆಯಲ್ಲಿ ಸಿ.ಟಿ.ಓ. ವೃತ್ತದಿಂದ ಡಿಕೆನ್ಸನ್​ ರಸ್ತೆ ಜಂಕ್ಷನ್​ವರೆಗೆ ರಸ್ತೆಯ ಎರಡೂ ಕಡೆ ವಾಹನ ನಿಲುಗಡೆಗೆ ಅವಕಾಶ ಇಲ್ಲ.
  • ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್​ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ ಪಾರ್ಕಿಂಗ್​ ಮಾಡುವಂತಿಲ್ಲ.
  • ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ ಪಾರ್ಕಿಂಗ್​ಗೆ ಅನುಮತಿಸಲಾಗುವುದಿಲ್ಲ.
  • ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದ ವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ ನೋ ಪಾರ್ಕಿಂಗ್.
  • ಕಬ್ಬನ್‌ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ ವಾಹನ ನಿಲುಗಡೆ ನಿಷೇಧಿಸಲಾಗಿದೆ.
  • ಲ್ಯಾವೆಲ್ಲೆ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ ಹಾಗೂ ವಿಠಲ್ ಮಲ್ಯ ರಸ್ತೆಯ ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್‌ಕಾಟನ್ ಬಾಲಕೀಯರ ಶಾಲೆಯವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಎಲ್ಲೆಲ್ಲಿ ಪಾರ್ಕಿಂಗ್​ಗೆ ಅವಕಾಶ?

ಪಂದ್ಯ ವೀಕ್ಷಣೆ ಮಾಡಲು ಬರುವವರಿಗೆ ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್ ಹಾಗೂ ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್ ಇದೆ.

ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನದಲ್ಲಿ ನಿಲ್ಲಿಸಲು ಸೂಚಿಸಲಾಗಿದೆ.

Tags:    

Similar News