ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಮೇಲೆ ದಾಳಿ | ಚಾಕುವಿನಿಂದ ಇರಿದ ಪ್ರಯಾಣಿಕ
ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಅವರಿಗೆ ಜಾರ್ಖಂಡ್ ಮೂಲದ ಹರಿಸಿಂಹ ಎಂಬ ಯುವಕ ಚಾಕು ಇರಿದಿದ್ದಾನೆ. ಬಳಿಕ ಬಸ್ಸಿನಲ್ಲಿದ್ದ ಸುತ್ತಿಗೆಯಿಂದ ಬಸ್ ಗಾಜುಗಳನ್ನು ಪುಡಿ ಮಾಡಿ, ಬಸ್ ಡೋರ್ ಅನ್ನು ಕಾಲಿನಿಂದ ಗುದ್ದಿ ಹುಚ್ಚನಂತೆ ವರ್ತಿಸಿದ್ದಾನೆ.;
ಫುಟ್ ಬೋರ್ಡ್ ಮೇಲೆ ನಿಂತಿದ್ದ ಯುವಕನಿಗೆ ಒಳಗೆ ಹೋಗು ಎಂದಿದ್ದಕ್ಕೆ ಕೋಪಗೊಂಡು ಕಂಡಕ್ಟರ್‌ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನಲ್ಲಿ ನಡೆದಿದೆ.
ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಗೆ ಜಾರ್ಖಂಡ್ ಮೂಲದ ಹರಿಸಿಂಹ ಎಂಬ ಯುವಕ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಬಸ್ಸಿನಲ್ಲಿದ್ದ ಸುತ್ತಿಗೆಯಿಂದ ಬಸ್ ಗಾಜುಗಳನ್ನು ಪುಡಿ ಮಾಡಿ, ಬಸ್ ಡೋರ್ ಅನ್ನು ಕಾಲಿನಿಂದ ಗುದ್ದಿ ಹುಚ್ಚನಂತೆ ವರ್ತಿಸಿದ್ದಾನೆ.
ಬಸ್ ನಂ- KA- 57-ಎಫ್0005 ನಲ್ಲಿ ಘಟನೆ ನಡೆದಿದ್ದು, ಚಾಕು ಇರಿತದಿಂದ ಗಾಯಗೊಂಡಿರುವ ನಿರ್ವಾಹಕರಾಗಿರುವ ಯೋಗೀಶ್ ಅವರನ್ನು ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ. ಬಂಧಿತ ಯುವಕನನ್ನು ಹರಿಸಿಂಹ ಎಂದು ಗುರುತಿಸಲಾಗಿದ್ದು, ವೈಟ್ ಫೀಲ್ಡ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.
ಚಾಕು ಇರಿದ ಪ್ರಯಾಣಿಕ ಬೆಳಿಗ್ಗೆ ಖಾಸಗಿ ಕಂಪನಿಗೆ ಇಂಟರ್ ವ್ಯೂ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಇದೆ.