Actor Darshan Case | ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಪವಿತ್ರಾ ಗೌಡ ಮಾಜಿ ಪತಿಯಿಂದ ಕೇಸ್?

ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ನಡುವೆ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಕೇಸ್ ದಾಖಲಿಸುವೆ ಎಂದು ಪವಿತ್ರಾ ಗೌಡ ಮಾಜಿ ಪತಿ ಹೇಳಿದ್ದಾರೆ.;

Update: 2024-06-20 06:40 GMT
ದರ್ಶನ್‌ ಪತ್ನಿ ವಿಜಯಲಕ್ಷ್ಮೀ
Click the Play button to listen to article

Actor Darshan Case | ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಕೇಸ್ ದಾಖಲಿಸುವೆ ಎಂದು ಪವಿತ್ರಾ ಗೌಡ ಮಾಜಿ ಪತಿ ಹೇಳಿದ್ದಾರೆ.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಅವರ ಗೆಳತಿ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ಅವರು ತನ್ನ ಅನುಮತಿ ಇಲ್ಲದೇ ತನ್ನ ಖಾಸಗಿ ಫೋಟೊಗಳನ್ನು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸುವುದಾಗಿ ತಿಳಿಸಿದ್ದಾರೆ.

ಈ ಹಿಂದೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಪ್ರೀತಿಯ ಬಗ್ಗೆ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಹಾಗೂ ತಮ್ಮ ಫ್ಯಾಮಿಲಿ ಪೋಟೊವನ್ನು ಪೋಸ್ಟ್ ಮಾಡಿ ತಮ್ಮ ಕುಟುಂಬದ ಬಗ್ಗೆ ತಿಳಿಸಿದರು. ಈ ನಡುವೆ ಪವಿತ್ರಾ ಗೌಡ ಅವರು ದರ್ಶನ್ ಜೊತೆಗೆ ಕಳೆದ ಕೆಲವು ಕ್ಷಣಗಳ ಕೊಲಾಜ್ ವಿಡಿಯೊವನ್ನು ಹಂಚಿಕೊಂಡಾಗ ಇದಕ್ಕೆ ಪ್ರತಿಕ್ರಿಯಿಸಿದ ವಿಜಯಲಕ್ಷ್ಮಿ ತಮ್ಮ ಪತಿಯ ಪೋಟೊ ಹಂಚಿಕೊಂಡಿದ್ದಕ್ಕೆ ಆಕೆಯನ್ನು ಪ್ರಶ್ನಿಸಿದ್ದರು.

ನಂತರ ಕೋಪಗೊಂಡ ವಿಜಯಲಕ್ಷ್ಮಿ ಅವರು ಪವಿತ್ರಾ ಗೌಡ, ಅವರ ಪತಿ ಸಂಜಯ್ ಸಿಂಗ್ ಮತ್ತು ಮಗಳೊಂದಿಗೆ ಇರುವ ಪೋಟೊವನ್ನು ಪೋಸ್ಟ್ ಮಾಡಿದ್ದರು. ಇದಕ್ಕೆ ಸಿಟ್ಟಾದ ಪವಿತ್ರಾ ಗೌಡ ತನ್ನ ಮಾಜಿ ಪತಿಯ ಅನುಮತಿಯಿಲ್ಲದೆ ತಮ್ಮ ವೈಯಕ್ತಿಕ ಪೋಟೊವನ್ನು ಹಂಚಿಕೊಳ್ಳಲು ಯಾವುದೇ ಹಕ್ಕಿಲ್ಲ ಎಂದು ವಿಜಯಲಕ್ಷ್ಮಿ ವಿರುದ್ಧ ಕಿಡಿಕಾರಿದ್ದರು.

ಇದೀಗ ಈ ವಿಚಾರ ಹೊಸ ವಿವಾದಕ್ಕೆ ಕಾರಣವಾಗಿದ್ದು, ಸಂಜಯ್ ಸಿಂಗ್ ಅವರು ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿಯವರ ವಿರುದ್ಧ ತಿರುಗಿ ಬಿದ್ದಿದ್ದಾರೆ. ವಿಜಯಲಕ್ಷ್ಮಿ ಅವರು ತನ್ನ ವೈಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ತನ್ನ ಅನುಮತಿ ಇಲ್ಲದೇ ತನ್ನ ವೈಯಕ್ತಿಕ ಪೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗಾಗಿ ಆಕೆಯ ವಿರುದ್ಧ ತಾನು ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

Tags:    

Similar News