ರೇಣುಕಾಸ್ವಾಮಿ ಕೊಲೆ ಪ್ರಕರಣ | ಜಾಮೀನು ಅರ್ಜಿ ಹಿಂಪಡೆದ ಪವಿತ್ರಾ ಗೌಡ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ತಮ್ಮ ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ.;

Update: 2024-09-13 10:53 GMT
ಪವಿತ್ರಾ ಗೌಡ
Click the Play button to listen to article

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ತಾವು ಸಲ್ಲಿಸಿದ ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ.

ಶುಕ್ರವಾರ ಹೈಕೋರ್ಟ್‌ ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾಯಮೂರ್ತಿಗಳು ಈಗಾಗಲೇ ಪ್ರಕರಣದ ಬಗ್ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವ ಮೊದಲು ನೀವು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದೀರಿ. ಹೀಗಾಗಿ ನೀವು ವಾಪಸ್‌ ಸೆಷನ್ಸ್‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಸೂಚಿಸಿದರು.

ನ್ಯಾಯಾಧೀಶರಿಂದ ಸೂಚನೆ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ.

ಕಳೆದ ಎರಡು ತಿಂಗಳಿನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ಆಕೆಯ ಪ್ರಿಯಕರ ನಟ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎ2 ದರ್ಶನ್ ಅವರನ್ನು ಇತ್ತೀಚೆಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ ಶೀಟ್‌ ಅನ್ನು ಪೊಲೀಸರು ಕೋರ್ಟ್‌ಗೆ ಸಲ್ಲಿಸಿದ್ದಾರೆ.

Tags:    

Similar News