Karnataka By̲̲-Election | ಮೂರೂ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ; ಮಧ್ಯಾಹ್ನ ಶೇ 43.46 ಮತ ಚಲಾವಣೆ

ಮತಗಟ್ಟೆಗಳ ಸುತ್ತ ನಿಷೇದಾಜ್ಞೆ ಜಾರಿಗೊಳಿಸಿದ್ದು, ಸೂಕ್ತ ಬಂದೋಬಸ್ತ್ ಒದಗಿಸಲಾಗಿದೆ. ಎಲೆಕ್ಟ್ರಾನಿಕ್ ಉಪಕರಣಗಳಿಗೆ ಮತಗಟ್ಟೆ ಕೇಂದ್ರಗಳಲ್ಲಿ ನಿರ್ಬಂಧ ವಿಧಿಸಲಾಗಿದೆ.

Update: 2024-11-13 08:55 GMT

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಡೆಯುತ್ತಿರುವ ಮತದಾನ ಶಾಂತಿಯುತವಾಗಿದೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ 43.46 ರಷ್ಟು ಮತದಾನ ದಾಖಲಾಗಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಶೇ 48 ರಷ್ಟು ಮತದಾನ ನಡೆದಿದೆ. ಅದೇ ರೀತಿ ಶಿಗ್ಗಾವಿ ಕ್ಷೇತ್ರದಲ್ಲಿ ಶೇ 43.50 ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮೂರೂ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ರಿಂದ ಆರಂಭವಾದ ಮತದಾನ ಶಾಂತ ರೀತಿಯಲ್ಲಿ ನಡೆಯುತ್ತಿದೆ. ಹಕ್ಕು ಚಲಾಯಿಸಲು ಮತದಾರರು ಮತಗಟ್ಟೆಗಳತ್ತ ಉತ್ಸಾಹದಿಂದ ಆಗಮಿಸುತ್ತಿದ್ದಾರೆ.


ಮತಗಟ್ಟೆಗಳ ಸುತ್ತ ನಿಷೇದಾಜ್ಞೆ ಜಾರಿಗೊಳಿಸಿದ್ದು, ಸೂಕ್ತ ಬಂದೋಬಸ್ತ್ ಒದಗಿಸಲಾಗಿದೆ. ಎಲೆಕ್ಟ್ರಾನಿಕ್ ಉಪಕರಣಗಳಿಗೆ ಮತಗಟ್ಟೆ ಕೇಂದ್ರಗಳಲ್ಲಿ ನಿರ್ಬಂಧ ವಿಧಿಸಲಾಗಿದೆ.

ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಗಳು ಬೆಳಿಗ್ಗೆಯೇ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಮತಗಟ್ಟೆಗಳಿಗೆ ಬಂದು ಮತದಾನ ಮಾಡಿದರು.


ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿಗೆ ಮತದಾನಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿಯಿರುವ ಜೈನ ಮಂದಿರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಚನ್ನಪಟ್ಟಣದ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕೆಂಗಲ್ ಆಂಜನೇಯಸ್ವಾಮಿ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Tags:    

Similar News