ಪೆನ್‌ಡ್ರೈವ್ ಪ್ರಕರಣ | ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಬರೆದ ಎರಡನೇ ಪತ್ರದಲ್ಲಿ ಏನಿದೆ?
ಮಹಿಳೆಯರ ಮೇಲಿನ ಅತ್ಯಾಚಾರದಂತಹ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡನೇ ಪತ್ರ ಬರೆದಿದ್ದಾರೆ.
ಮಹಿಳೆಯರ ಮೇಲಿನ ಅತ್ಯಾಚಾರದಂತಹ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡನೇ ಪತ್ರ ಬರೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಪ್ರತಿಯನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, ʻʻಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರದಂತಹ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಪಡಿಸಿ, ಕಾನೂನಿನಡಿ ವಿಚಾರಣೆ ಎದುರಿಸಲು ಎಸ್‌ಐಟಿ ಗೆ ಕೇಂದ್ರ ಸರ್ಕಾರ ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಒತ್ತಾಯಿಸುತ್ತಿದ್ದೇನೆʼʼ ಎಂದು ಪೋಸ್ಟ್ ಮಾಡಿದ್ದಾರೆ.
ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರದಂತಹ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಪಡಿಸಿ, ಕಾನೂನಿನಡಿ ವಿಚಾರಣೆ ಎದುರಿಸಲು ಎಸ್‌ಐಟಿ ಗೆ ಕೇಂದ್ರ ಸರ್ಕಾರ ನೆರವಾಗುವಂತೆ ಪ್ರಧಾನಿ @narendramodi ಅವರಿಗೆ ಪತ್ರದ ಮೂಲಕ… pic.twitter.com/XWlXObDSxx
— Siddaramaiah (@siddaramaiah) May 23, 2024
ಪತ್ರದಲ್ಲಿ ಏನಿದೆ?
"ಪ್ರಜ್ವಲ್ ರೇವಣ್ಣ ಮೇಲೆ ಆರೋಪ, ಗಂಭೀರ ಘಟನೆಗಳ ಬಗ್ಗೆ ಗಮನ ಸೆಳೆಯಲು ನಾನು ಮತ್ತೊಮ್ಮೆ ನಿಮಗೆ ಪತ್ರ ಬರೆಯುತ್ತಿದ್ದೇನೆ. ಈ ಘಟನೆಗಳು ಕರ್ನಾಟಕ ರಾಜ್ಯದ ಜನರ ಆತ್ಮಸಾಕ್ಷಿಯನ್ನು ಬೆಚ್ಚಿ ಬೀಳಿಸಿವೆ. ಅಲ್ಲದೇ ರಾಷ್ಟ್ರವ್ಯಾಪಿ ಆತಂಕಕ್ಕೂ ಕಾರಣವಾಗಿವೆ. ಪ್ರಸ್ತುತ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮಾಜಿ ಪ್ರಧಾನಿ ಮೊಮ್ಮಗನಾಗಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ಏಪ್ರಿಲ್ 27 ರಂದು ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ಸಂಗತಿ."
"2024 ರಲ್ಲಿ ಡಿ1135500 ಸಂಖ್ಯೆಯ ತನ್ನ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿಕೊಂಡು ದೇಶ ಬಿಟ್ಟು ಜರ್ಮನಿಗೆ ಹೋಗಿದ್ದಾರೆ. ಅವರ ವಿರುದ್ಧ ಆರೋಪಗಳು ಬಂದಾಗ, ಹೇಯ ಕೃತ್ಯಗಳು ಹೊರಬಂದ ಬಳಿಕ ಮೊದಲ ಎಫ್‍ಐಆರ್ ದಾಖಲಾಗುವ ಕೆಲವೇ ಗಂಟೆಗಳ ಮೊದಲು ಪಲಾಯನ ಮಾಡಿದ್ದಾರೆ. ದೇಶದಿಂದ ಪಲಾಯನ ಮಾಡಲು ಮತ್ತು ಕ್ರಿಮಿನಲ್ ಮೊಕದ್ದಮೆಗಳಿಂದ ತಪ್ಪಿಸಿಕೊಳ್ಳಲು ತಮ್ಮ ರಾಜತಾಂತ್ರಿಕ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ."
"ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವ ಮೂಲಕ ಕರ್ನಾಟಕ ಸರ್ಕಾರವು ತ್ವರಿತ ಕ್ರಮಗಳನ್ನು ಕೈಗೊಂಡಿದೆ. ಪ್ರಜ್ವಲ್ ರೇವಣ್ಣ ಮಹಿಳೆಯರ ವಿರುದ್ಧ ಎಸಗಿರುವ ಅಪರಾಧಗಳ ಬಗ್ಗೆ ಎಸ್‍ಐಟಿ ತನಿಖೆ ನಡೆಸುತ್ತಿದೆ. ಕ್ರಿಮಿನಲ್ ಆರೋಪಗಳ ತನಿಖೆಗಾಗಿ ಆರೋಪಿಯನ್ನು ವಶಕ್ಕೆ ಪಡೆಯಲು ಎಸ್‍ಐಟಿ ಪ್ರಯತ್ನಿಸುತ್ತಿದೆ. ಸಿಆರ್‌ಪಿಸಿ ಕಲಂ 41ಎ ಅಡಿಯಲ್ಲಿ ತನಿಖಾಧಿಕಾರಿಯಿಂದ ಲುಕ್‍ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಜಾರಿ ಆಗಿದೆ. ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಆರೋಪಿ ಪ್ರಜ್ವಲ್ ರೇವಣ್ಣ ಇಂದಿಗೂ ತಲೆಮರೆಸಿಕೊಂಡಿದ್ದಾರೆ. ಇದು ತೀವ್ರ ಕಳವಳಕಾರಿ ಸಂಗತಿ. ಪ್ರಜ್ವಲ್ ರೇವಣ್ಣ ವಿರುದ್ಧದ ಎಫ್‍ಐಆರ್‌ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಮಹಿಳೆಯರ ಘನತೆಗೆ ಧಕ್ಕೆ ಮತ್ತು ಬಲಿಪಶುಗಳಿಗೆ ಬೆದರಿಕೆ ಹಾಕುವ ಸಲುವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆಗಳನ್ನು ವೀಡಿಯೊ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿರುವುದು ಸೇರಿದಂತೆ ಗಂಭೀರ ಸ್ವರೂಪದ ಆರೋಪಗಳಿವೆ. ಜನಪ್ರತಿನಿಧಿಯಾಗಿ ಸರ್ಕಾರಿ ಅಧಿಕಾರ ಮತ್ತು ಸವಲತ್ತುಗಳ ದುರುಪಯೋಗ ಮತ್ತು ಉದ್ದೇಶಪೂರ್ವಕವಾಗಿ ಕಾನೂನು ಪ್ರಕ್ರಿಯೆಗಳಿಗೆ ಅಸಹಕಾರ ತೋರುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಈ ಬಗ್ಗೆ ಗಂಭೀರವಾದ ಕ್ರಮ ತೆಗೆದುಕೊಳ್ಳಬೇಕು."
"ತನಿಖೆ ಮತ್ತು ವಿಚಾರಣೆಯನ್ನು ಎದುರಿಸಲು ಆರೋಪಿಯ ಎಸ್‌ಐಟಿ ಮುಂದೆ ಹಾಜರಾಗಲು ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವುದು ಮುಖ್ಯ. ಇದನ್ನು ಒತ್ತಿ ಹೇಳುವ ಅಗತ್ಯವಿಲ್ಲ. ಇದೇ ರೀತಿಯ ಕಳವಳವನ್ನು ವ್ಯಕ್ತಪಡಿಸುವ ನನ್ನ ಹಿಂದಿನ ಪತ್ರವು ಸಹ ಪರಿಸ್ಥಿತಿಯ ಗಂಭೀರತೆಯನ್ನು ಪ್ರಸ್ತಾಪಿಸಿತ್ತು. ಆದರೆ, ನನಗೆ ತಿಳಿದಿರುವಂತೆ, ಆ ಪತ್ರದ ಬಗ್ಗೆ ತಾವು ಈವರೆಗೆ ಯಾವುದೇ ಕ್ರಮ ತೆಗೆದುಕೊಳ್ಳದಿರುವುದು ವಿಷಾದನೀಯ. ಆದ್ದರಿಂದ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪಾಸ್‌ಪೋರ್ಟ್ ಕಾಯಿದೆ, 1967 ರ ಸೆಕ್ಷನ್ 10(3)(ಎಚ್) ಅಡಿಯಲ್ಲಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಿ ತ್ವರಿತ ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದು ನಾನು ಮತ್ತೊಮ್ಮೆ ಮನವಿ ಮಾಡುತ್ತೇನೆ."