ಪೆನ್‌ಡ್ರೈವ್‌ ಪ್ರಕರಣ | ಎಚ್‌ ಡಿ ರೇವಣ್ಣ ಜಾಮೀನು ವಜಾ: ಬಂಧನ ಸನ್ನಿಹಿತ

Update: 2024-05-04 13:00 GMT

ಪೆನ್‌ ಡ್ರೈವ್‌ ಪ್ರಕರಣದ ಸಂತ್ರಸ್ತೆಯ ಅಪಹರಣ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಶಾಸಕ ಎಚ್‌ ಡಿ ರೇವಣ್ಣಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ.

ಪ್ರಕರಣದಲ್ಲಿ ಜಾಮೀನು ಕೋರಿ ರೇವಣ್ಣ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು.

ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಶನಿವಾರ ಸಂಜೆ ತೀರ್ಪು ಪ್ರಕಟಿಸಿದ್ದು, ಪ್ರಕರಣದ ಗಂಭೀರತೆ ಹಿನ್ನೆಲೆಯಲ್ಲಿ ಜಾಮೀನು ನೀಡಲು ನಿರಾಕರಿಸಿದೆ. 

ಈ ನಡುವೆ, ರೇವಣ್ಣ ಬಂಧನಕ್ಕೆ ಲುಕ್‌ ಔಟ್‌ ನೋಟಿಸ್‌ ಜಾರಿ ಮಾಡಿರುವ ಪ್ರಕರಣದ ವಿಚಾರಣೆ ನಡೆಸುತ್ತಿರುವ ಎಸ್‌ ಐಟಿ, ಅವರ ಬಂಧನಕ್ಕಾಗಿ ಕಾದಿದೆ.

Similar News