ಬೆಂಗಳೂರು ಕಂಬಳ ನಿಲ್ಲಿಸಲು ಹೈಕೋರ್ಟ್‌ ಮೊರೆ ಹೋದ PETA

ರಾಜ್ಯಾದ್ಯಂತ ಇರುವ ಕೋಣಗಳನ್ನು ಬೆಂಗಳೂರಿಗೆ ಕರೆತರಲಾಗುವುದು. ಈ ಘಟನೆಯು ನಿಜವಾಗಿಯೂ ಪ್ರಾಣಿಗಳಿಗೆ ಕ್ರೂರವಾಗಿದೆ ಎಂದು ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ನ್ಯಾಯಾಲಯಕ್ಕೆ ತಿಳಿಸಿದರು.

Update: 2024-10-21 13:13 GMT
ಕಂಬಳ
Click the Play button to listen to article

ಅ.25 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವನ್ನು ನಿಲ್ಲಿಸುವಂತೆ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (PETA)ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದೆ.

ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್ ಅವರ ಪೀಠದ ಮುಂದೆ ಸೋಮವಾರ ಅರ್ಜಿಯನ್ನು ತುರ್ತು ವಿಚಾರಣೆ ಮಾಡಬೇಕೆಂದು ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ಕೋರ್ಟ್‌, ವಿಚಾರಣೆ ಕೈಗೆತ್ತಿಕೊಂಡಿದೆ.

ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕವಾಗಿ ನಡೆಯುವ ಈ ಕಾರ್ಯಕ್ರಮವನ್ನು ಇದೇ ತಿಂಗಳು ನಗರದಲ್ಲಿ ಆಯೋಜಿಸಲಾಗಿದ್ದು, ಇದಕ್ಕಾಗಿ ರಾಜ್ಯಾದ್ಯಂತ ಇರುವ ಕೋಣಗಳನ್ನು ಬೆಂಗಳೂರಿಗೆ ಕರೆತರಲಾಗುವುದು. ಹೀಗೆ ಕೋಣಗಳನ್ನು ತರುವುದು ನಿಜವಾಗಿಯೂ ಪ್ರಾಣಿಗಳಿಗೆ ಕ್ರೂರವಾಗಿದೆ ಎಂದು ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ನ್ಯಾಯಾಲಯಕ್ಕೆ ತಿಳಿಸಿದರು. ಕಂಬಳ ಒಂದು ಪ್ರಾಣಿ ಹಿಂಸಾತ್ಮಕ ಕೃತ್ಯವಾಗಿದೆ ಎಂಬುವುದು ಪೇಟಾ ವಾದವಾಗಿದೆ ಎಂದು ಅವರು ಹೇಳಿದರು. ಆದ ಪೀಠವು, ಅಕ್ಟೋಬರ್ 26ಕ್ಕೆ ಕಂಬಳ ಸ್ಪರ್ಧೆ ಆಯೋಜಿಸಲಾಗಿದೆ ಎನ್ನುತ್ತಿದ್ದೀರಿ. ಕೊನೆಯ ಕ್ಷಣದಲ್ಲಿ ನ್ಯಾಯಾಲಯದ ಮುಂದೆ ಬಂದಿರುವುದೇಕೆ? ಎಂದು ಪ್ರಶ್ನಿಸಿದೆ.

ಈ ಕುರಿತು ಜುಲೈನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಆದರೆ ಇಲ್ಲಿಯವರೆಗೆ ಅದನ್ನು ವಿಚಾರಣೆಗೆ ನಿಗದಿಪಡಿಸಲಾಗಿಲ್ಲ ಎಂದು PETA ಹೇಳಿದೆ. ಹೀಗಾಗಿ ತುರ್ತು ವಿಚಾರಣೆ ಕೋರಿ ವಿಷಯವನ್ನು ಪ್ರಸ್ತಾಪಿಸುವಂತೆ ವಕೀಲರು ಒತ್ತಾಯಿಸಿದರು. ವಾದ ಆಲಿಸಿದ ಪೀಠ ಈ ಬಗ್ಗೆ ಮಂಗಳವಾರ ವಿಚಾರಣೆ ನಡೆಸುವುದಾಗಿ ಹೇಳಿದೆ.

ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನ ಬಂಡಿ ಓಟಕ್ಕೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಕಳೆದ ವರ್ಷ ಮೇ ತಿಂಗಳಲ್ಲಿ ಎತ್ತಿಹಿಡಿದಿತ್ತು. ಈ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿಯೊಂದಿಗೆ PETA ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

Tags:    

Similar News