Petrol Price Hike: ತೆರಿಗೆ ಹೆಚ್ಚಳದ ಅನಿವಾರ್ಯತೆ ಸೃಷ್ಟಿಸಿದ್ದು ಮೋದಿ ಸರ್ಕಾರ: ಸಿದ್ದರಾಮಯ್ಯ ಟೀಕೆ

ಕೇಂದ್ರ ಸರ್ಕಾರ ಜಿ.ಎಸ್.ಟಿ. ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ. , ಆದಾಯ ತೆರಿಗೆ, ಕೇಂದ್ರ ಅಬಕಾರಿ ಸುಂಕ ಮೊದಲಾದ ಮೂಲಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಯಾವುದೇ ಮೂಲಗಳಿಲ್ಲ

Update: 2024-06-17 09:12 GMT

ರಾಜ್ಯದ ಜನರ ಪಾಲಿನ ತೆರಿಗೆ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಿಸುವ ಪ್ರಮೇಯವೇ ಬರುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಲೆ ಏರಿಕೆ ಕ್ರಮವನ್ನು ಸಮರ್ಥಿಸಿಕೊಳ್ಳುವ ಜತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿಸಿದ್ದರಾಮಯ್ಯ ಅವರು, ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಕೇಂದ್ರದ ಮೋದಿ ಸರ್ಕಾರ ಹೇಗೆ ಸೃಷ್ಟಿಸಿತು, ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿರುವ ಪರಿಸ್ಥಿತಿಯನ್ನು ವಿವರಿಸಿದರು.

ಕೇಂದ್ರ ಸರ್ಕಾರ ಜಿ.ಎಸ್.ಟಿ. ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ. , ಆದಾಯ ತೆರಿಗೆ, ಕೇಂದ್ರ ಅಬಕಾರಿ ಸುಂಕ ಮೊದಲಾದ ಮೂಲಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಯಾವುದೇ ಮೂಲಗಳಿಲ್ಲ.

ಈ ಹಿನ್ನೆಲೆಯಲ್ಲಿ ಇತರ ರಾಜ್ಯಗಳ ಪೆಟ್ರೋಲ್ ಡೀಸೆಲ್ ಬೆಲೆಗೆ ಹೋಲಿಸಿದರೆ ರಾಜ್ಯದ ದರಗಳು ಕಡಿಮೆ ಇರುವುದು ಗಮನಿಸಿ, ರಾಜ್ಯ ಸರ್ಕಾರ ಅಲ್ಪ ಪ್ರಮಾಣದ ತೆರಿಗೆ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದರು. ಈ ಬಗ್ಗೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಅವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ ಎಂದು ಪ್ರಶ್ನಿಸಿದರು.

ಕರ್ನಾಟಕಕ್ಕೆ ಅನ್ಯಾಯ

ಕರ್ನಾಟಕ ರಾಜ್ಯಕ್ಕೆ ಕೇಂದ್ರದ ಬಿಜೆಪಿ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತ ಬಂದಿದ್ದರೂ, ಬಿಜೆಪಿಯವರು ದನಿ ಎತ್ತಿಲ್ಲ ಎಂದು ? ತೆರಿಗೆ ಅನ್ಯಾಯವಾದಾಗ ಸಂಸದರು ಈ ವಿಷಯದ ಕುರಿತು ಮಾತನಾಡಿಲ್ಲ; ರಾಜ್ಯಕ್ಕೆ 15ನೇ ಹಣಕಾಸು ಆಯೋಗವು ವಿಶೇಷ ಅನುದಾನ ನೀಡುವಂತ ಶಿಫಾರಸು ಮಾಡಿದ್ದರೂ, ಕೇಂದ್ರ ಸರ್ಕಾರ ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಆಯವ್ಯಯದಲ್ಲಿ ನಿರ್ಮಲಾ ಸೀತಾರಾಮನ್ ಅವರು 5,000 ಕೋಟಿ ರೂ. ಒದಗಿಸುವುದಾಗಿ ಘೋಷಿಸಿದರೂ, ಬಿಡಿಗಾಸೂ ನೀಡಿಲ್ಲ. ಈ ವಿಷಯಗಳ ಕುರಿತು ಬಿಜೆಪಿಯವರು ದನಿ ಎತ್ತಿದ್ದಾರೆಯೇ? ಬಿಜೆಪಿಯು ಬಡವರು, ದಲಿತರ ವಿರೋಧಿ ಧೋರಣೆ ಹೊಂದಿದೆ ಎಂದು ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಪ್ರಶ್ನಿಸಿದರು.

2015 ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅವರ ಲಾಭವನ್ನು ದೇಶದ ಜನರಿಗೆ ನೀಡದೆ ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದೆ ಎಂದ ಸಿದ್ದರಾಮಯ್ಯ, ಡಾ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 113 ಡಾಲರ್ ಇತ್ತು. 2015 ರಲ್ಲಿ ಈ ಬೆಲೆ ಅರ್ಧಕ್ಕರ್ಧ ಕಡಿಮೆಯಾದರೂ, ಬೆಲೆ ಇಳಿಸಿ, ಜನರ ಹೊರೆ ಕಡಿಮೆ ಮಾಡುವ ಕಾಳಜಿಯನ್ನು ನರೇಂದ್ರ ಮೋದಿಯವರು ತೋರಲಿಲ್ಲ. ಬಿಜೆಪಿಯವರು ಯಾರ ವಿರುದ್ಧ ಹೋರಾಡಬೇಕು ಎಂದು ಪ್ರಶ್ನಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು ಮೂರು ಸಾವಿರ ಕೋಟಿ ರೂಪಾಯಿಗಳು ರಾಜ್ಯದ ಜಾನೆಗೆ ಸಂದಾಯವಾಗುತ್ತದೆ, ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆ ಅದು ನಮ್ಮ ಜೇಬಿಗೆ ಹೋಗುವುದಿಲ್ಲ ಎಂದರು.

ದಕ್ಷಿಣ ಭಾರತದಲ್ಲಿ ಕಡಿಮೆ

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ . 2015 ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅವರ ಲಾಭವನ್ನು ದೇಶದ ಜನರಿಗೆ ನೀಡದೆ ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದ್ದಾರೆ ಎಂದರು.

ಜನರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಢೀಕರಣದ ಉದ್ದೇಶದೊಂದಿಗೆ ಪೆಟ್ರೋಲ್, ಡೀಸೆಲ್ ಮಾರಾಟ ತೆರಿಗೆಯಲ್ಲಿ 3 ರೂ. ಗಳಷ್ಟು ಹೆಚ್ಚಿಸಲಾಗಿದೆ. ಇತರ ರಾಜ್ಯಗಳ ಪೆಟ್ರೋಲ್ ಡೀಸೆಲ್ ಬೆಲೆಗೆ ಹೋಲಿಸಿದರೆ ರಾಜ್ಯದ ದರಗಳು ಕಡಿಮೆ ಇರುವುದು ಗಮನಿಸಿ, ರಾಜ್ಯ ಸರ್ಕಾರ ಅಲ್ಪ ಪ್ರಮಾಣದ ತೆರಿಗೆ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದರು.

ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿಯವರು, ಬೆಲೆ ಏರಿಕೆಯ ಹೊರತಾಗಿಯೂ ರಾಜ್ಯದ ಪೆಟ್ರೋಲ್, ಡೀಸೆಲ್ ಬೆಲೆ ನೆರೆಯ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಕಡಿಮೆ ಎಂದು ವಿವರಿಸಿದರು. ಜನರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಢೀಕರಣದ ಉದ್ದೇಶದೊಂದಿಗೆ ಪೆಟ್ರೋಲ್, ಡೀಸೆಲ್ ಮಾರಾಟ ತೆರಿಗೆಯಲ್ಲಿ 3 ರೂ. ಗಳಷ್ಟು ಹೆಚ್ಚಿಸಲಾಗಿದೆ. ರಾಜ್ಯ ಸರ್ಕಾರ 3 ರೂ. ಗಳಷ್ಟು ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿದ್ದರೂ, ದಕ್ಷಿಣದ ಇತರ ರಾಜ್ಯಗಳು ಹಾಗೂ ಬಿಜೆಪಿ ಆಡಳಿತ ಇರುವ ರಾಜ್ಯಗಳಿಗಿಂತ ಕಡಿಮೆ ಇದೆ ಎಂದು ಅಂಕಿ-ಅಂಶಗಳೊಂದಿಗೆ ಸ್ಪಷ್ಟ ಪಡಿಸಿದರು.

GST ಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿದೆ . ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ . ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ

ಬರಗಾಲದ ಬಗ್ಗೆ ಪರಿಹಾರ ತೆಗೆದುಕೊಳ್ಳಲು ಕೋರ್ಟಿಗೆ ಹೋಗಬೇಕಾಗಿ ಬಂತು. ಕೋರ್ಟು ಸೂಚನೆ ನೀಡಿದ ನಂತರ 18 ಸಾವಿರ ಕೋಟಿ ಕೇಳಿದರೆ 3454 ಕೋಟಿ ರೂ. ಪರಿಹಾರ ನೀಡಿದ್ದಾರೆ.

Tags:    

Similar News