Petrol Price Hike| ಆರ್.ಅಶೋಕ್ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ: ಸಿಎಂ ವ್ಯಂಗ್ಯ
ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದಾಗ ಪೆಟ್ರೋಲ್ ಮೇಲೆ ಕೇಂದ್ರ ಅಬಕಾರಿ ಸುಂಕ 9.48 ರೂಗಳಷ್ಟಿತ್ತು. 2020ರ ಮೇ ನಲ್ಲಿ 32.98 ರೂ.ಗಳಿಗೆ ಹೆಚ್ಚಾಗಿದೆ. ಈ ಮಟ್ಟದ ಏರಿಕೆ ವಿರುದ್ಧ ಬಿಜೆಪಿಯವರಾಗಲೀ, ಆರ್.ಅಶೋಕ್ ಆಗಲಿ ಬಾಯಿ ಬಿಟ್ಟಿಲ್ಲ. ಅವರಿಗೆ ಅರ್ಥ ಆಗಿದ್ದರೆ ತಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಛೇಡಿಸಿದ್ದಾರೆ.
ಗ್ಯಾರಂಟಿಗಾಗಿ 55,000 ಕೋಟಿ ರೂ. ಮೀಸಲಿಟ್ಟಿರುವುದರಿಂದ ಹಣ ಕೊರತೆಯಾಗಿ ಸಂಬಳ ಕೊಡಲು ದುಡ್ಡಿಲ್ಲ. ಆದ್ದರಿಂದ ಜನರ ಮೇಲೆ 3-4 ಸಾವಿರ ಕೋಟಿ ರೂ ಹೊರೆ ಹಾಕಿ ತೈಲ ದರ ಏರಿಸಲಾಗಿದೆ ಎಂದು ಅಶೋಕ್ ಟೀಕಿಸಿದ್ದರು. ಅದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್ ಗೆ ಇದೆಲ್ಲಾ ಅರ್ಥ ಆಗಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಇಲ್ಲ ಎಂದು ವ್ಯಂಗ್ಯವಾಡಿದರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ 40% ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳಷ್ಟು ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರ ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದಾರೆ ಎಂದರು.
ಇಂತಹ ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ ಎಂದು ಪ್ರಶ್ನಿಸಿದರು.
ಬಿಜೆಪಿಯವರು ಬಡವರು, ದಲಿತರು, ಜನಸಾಮಾನ್ಯರ ಕಾರ್ಯಕ್ರಮಗಳ ಕಲ್ಯಾಣ ಕಾರ್ಯಕ್ರಮಗಳಿಗೆ ವಿರುದ್ಧವಿದ್ದಾರೆ. ಬಸ್ನಲ್ಲಿ ಉಚಿತ ಪ್ರಯಾಣ, ತಿಂಗಳಿಗೆ ಎರಡು ಸಾವಿರ ನೀಡಿದರೆ ಅವರ ಆರ್ಥಿಕ ಶಕ್ತಿ ಹೆಚ್ಚಾಗುವುದಿಲ್ಲವೇ? ಉಚಿತ ವಿದ್ಯುತ್ ನೀಡಿದರೆ ಅವರಿಗೆ ಉಳಿತಾಯವಾಗುವುದಿಲ್ಲವೇ? ಹೆಚ್ಚುವರಿ ಅಕ್ಕಿ ಕೇಳಿದರೆ, ಕೊಟ್ಟಿಲ್ಲ. ಯಾರಾದರೂ ಮಾತಾಡಿದರೇ? ಎಂದು ಪ್ರಶ್ನಿಸಿದರು.
ಈ ಬೆಲೆ ಏರಿಕೆಯಿಂದ ಸುಮಾರು 3,000 ಕೋಟಿ ರೂ. ಸಂಪನ್ಮೂಲ ದೊರೆಯಲಿದೆ. ಗ್ಯಾರಂಟಿ ಯೋಜನೆಗಳಿಗೆ 60000 ಕೋಟಿ ರೂ. ಅಗತ್ಯವಿದೆ. ಸರ್ಕಾರ ಪಾಪರ್ ಆಗಿದೆ ಎಂದು ವಿರೋಧ ಪಕ್ಷದ ನಾಯಕರು ಹೇಗೆ ಹೇಳುತ್ತಾರೆ? ನಾವು ಯಾರದ್ದಾದರೂ ಸಂಬಳ ನಿಲ್ಲಿಸಿದ್ದೇವೆಯೇ? ಆಯವ್ಯಯದಲ್ಲಿ ಘೋಷಿಸಿದ ಕಾರ್ಯಕ್ರಮಗಳಿಗೆ ಅನುದಾನ ಒದಗಿಸದೇ ಸ್ಥಗಿತ ಗೊಳಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು.
ಈ ಬೆಲೆ ಏರಿಕೆಯಿಂದ 3000 ಕೋಟಿ ಆದಾಯ ಬರಬಹುದು. ಗ್ಯಾರಂಟಿ ಯೋಜನೆಗಳಿಗೆ 60000 ಕೋಟಿ ಬೇಕು. ಯಾರಿಗೆ ಕೊಡುತ್ತಾ ಇದ್ದೇವೆ? ಶ್ರೀಮಂತರಿಗೆ ಕೊಡುತ್ತಾ ಇದ್ದೀವಾ?
ಅಂಬಾನಿ, ಅದಾನಿಗಳಿಗೆ ಸಾಲ ಮನ್ನಾ ಮಾಡ್ತಾ ಇದ್ದೀವಾ? ರೈತರ ಸಾಲ ಮನ್ನ ಮಾಡಿ ಎಂದರೆ ಒಂದು ರೂಪಾಯಿ ಸಾಲ ಮನ್ನಾ ಮಾಡಿಲ್ಲ. ಇವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಇದೆಯೇ ಎಂದು ಟೀಕಿಸಿದರು.
ಸರ್ಕಾರ ಪಾಪರ್ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಗೆ ಹೇಳುತ್ತಾರೆ? ನಾವು ಯಾರದ್ದಾದರೂ ಸಂಬಳ ನಿಲ್ಲಿಸಿದ್ದೇವೆಯೇ? ಆಯವ್ಯಯದಲ್ಲಿ ಘೋಷಿಸಿದ ಕಾರ್ಯಕ್ರಮಗಳಿಗೆ ಅನುದಾನ ಒದಗಿಸದೇ ಸ್ಥಗಿತ ಗೊಳಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು.