ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿಗೆ ವಿಸ್ತರಣೆಗೊಂಡಿರುವ ವಂದೇ ಭಾರತ್ ರೈಲಿಗೆ ಭಾನುವಾರ ಚಾಲನೆ ನೀಡಿದರು. ಇದೇ ವೇಳೆ ಅಮೃತ್ಸರ್ ದಿಂದ ಶ್ರೀಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್ಪುರ್ (ಅಜ್ನಿ) ಯಿಂದ ಪುಣೆಯವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಜತೆಯಲ್ಲಿದ್ದರು.ಮಧ್ಯಾಹ್ನ 12.30 ಕ್ಕೆ ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಒಟ್ಟು 19.15 ಕಿ.ಮೀ. ಹಳದಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಮೋದಿ ಅವರು ರಾಗಿಗುಡ್ಡದಲ್ಲಿ ಚಾಲನೆ ನೀಡಿದರು.ಇದೇ ವೇಳೆ ಮೆಟ್ರೋ ಹಂತ -3 ಶಂಕುಸ್ಥಾಪನೆ ನೆರವೇರಿಸಿ, ಮೆಟ್ರೋದಲ್ಲಿ ಎಲೆಕ್ಟ್ರಾನಿಕ್ ಸಿಟಿ ವರೆಗೂ ಪ್ರಯಾಣಿಸಿದರು. ಹಸಿರು ಮಾರ್ಗದಲ್ಲಿ ಮೆಟ್ರೋ ಇರಲ್ಲಪ್ರಧಾನಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬಿಎಂಆರ್ ಸಿಎಲ್ ಹಸಿರು ಮಾರ್ಗದ ಲಾಲ್ ಬಾಗ್ ನಿಂದ ಆರ್.ವಿ.ರಸ್ತೆವರೆಗಿನ ಮೆಟ್ರೋ ಸಂಚಾರವನ್ನು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ನಿಲ್ಲಿಸುವಂತೆ ಬಸವನಗುಡಿ ಪೊಲೀಸ್ ಠಾಣೆಯ ಪಿಐ ಕೋರಿಕೆ ಸಲ್ಲಿಸಿದ್ದರು. ಹಾಗಾಗಿ, ಇಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಲಾಲ್ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ ಮತ್ತು ಆರ್.ವಿ. ರಸ್ತೆ ಮೆಟ್ರೊ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು. ಮೆಟ್ರೊ ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆ ಗಮನಿಸಿ ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಲು ಸೂಚಿಸಲಾಗಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.ಇನ್ನು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಅವರು ಚಾಲನೆ ನೀಡುವ ಹಿನ್ನೆಲೆಯಲ್ಲಿ ರೈಲು ನಿಲ್ದಾಣದ ಎರಡನೇ ಪ್ರವೇಶ ದ್ವಾರವನ್ನು ಮುಚ್ಚಲಾಗಿದೆ. ಅಲ್ಲದೇ ಕೆಎಸ್ಆರ್ ಬೆಂಗಳೂರು - ಅಶೋಕಪುರ-ಕೆಎಸ್ಆರ್ ಬೆಂಗಳೂರು, ಕೆಎಸ್ಆರ್ ಬೆಂಗಳೂರು -ತುಮಕೂರು-ಕೆಎಸ್ಆರ್ ಬೆಂಗಳೂರು, ಕೆಎಸ್ಆರ್ ಬೆಂಗಳೂರು - ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ರೈಲುಗಳನ್ನು ರದ್ದು ಮಾಡಲಾಗಿದೆ.ಜನದಟ್ಟಣೆ ಕಡಿಮೆ ಮಾಡಲು ಹಲವು ರೈಲುಗಳ ಮಾರ್ಗ ಬದಲಾವಣೆ, ರದ್ದು, ವಿಳಂಬ ಸಂಚಾರಕ್ಕೆ ಕ್ರಮ ಕೈಗೊಂಡಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.