ಆ.10ಕ್ಕೆ ಹಳದಿ ಮೆಟ್ರೋ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನ ; ರೋಡ್ ಶೋ, ಸಾರ್ವಜನಿಕ ಸಮಾವೇಶ ರದ್ದು

ಆ.10 ರಂದು 'ನಮ್ಮ ಮೆಟ್ರೋ' ಹಳದಿ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಆದರೆ, ಭದ್ರತಾ ಕಾರಣಗಳಿಂದ ರೋಡ್ ಶೋ ಹಾಗೂ ಸಾರ್ವಜನಿಕ ಸಮಾವೇಶವನ್ನು ರದ್ದುಪಡಿಸಲಾಗಿದೆ.;

Update: 2025-08-06 03:43 GMT

ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರೋಡ್ ಶೋ ಮತ್ತು ಸಾರ್ವಜನಿಕ ಸಮಾವೇಶವನ್ನು ರದ್ದುಪಡಿಸಲಾಗಿದೆ.

ಆ.10 ರಂದು 'ನಮ್ಮ ಮೆಟ್ರೋ' ಹಳದಿ ಮಾರ್ಗವನ್ನು  ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಆದರೆ, ಭದ್ರತಾ ಕಾರಣಗಳಿಂದ ರೋಡ್ ಶೋ ಹಾಗೂ ಸಾರ್ವಜನಿಕ ಸಮಾವೇಶವನ್ನು ರದ್ದುಪಡಿಸಲಾಗಿದೆ ಎಂದು ಬಿಜೆಪಿ‌ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿಯವರ ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಭವ್ಯ ರೋಡ್ ಶೋ ಮತ್ತು ಸಾರ್ವಜನಿಕ ಸಮಾವೇಶ ನಡೆಸಲು ಬಿಜೆಪಿ ಉದ್ದೇಶಿಸಿತ್ತು. ಬೆಂಗಳೂರಿನ ಜಯನಗರದ ಆಟದ ಮೈದಾನದಲ್ಲಿ ಸಮಾವೇಶ ನಡೆಸಲು ಎಲ್ಲ ಸಿದ್ಧತೆಗಳನ್ನೂ ಮಾಡಲಾಗಿತ್ತು. ಆದರೆ ಸಮಯದ ಅಭಾವ ಹಾಗೂ ಭದ್ರತೆ ದೃಷ್ಟಿಯಿಂದ ಈ ಎರಡೂ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ‌ನಿಗದಿಯಂತೆ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮ ಮಾತ್ರ ಇರಲಿದೆ. 

ಪ್ರಧಾನಿ ಮೋದಿ ಅವರು ಹಳದಿ ಮಾರ್ಗದ ಮೆಟ್ರೋಗೆ ಚಾಲನೆ ನೀಡುವ ಜತೆಗೆ ಕಿತ್ತಳೆ ಮಾರ್ಗದ ಮೆಟ್ರೋ ಕಾಮಗಾರಿಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಬಿಜೆಪಿ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

Tags:    

Similar News