ಮುರುಘಾ ಶ್ರೀ ಪೋಕ್ಸೋ ಪ್ರಕರಣ | ನ್ಯಾಯಾಲಯಕ್ಕೆ ಶರಣಾದ ಡಾ. ಶಿವಮೂರ್ತಿ ಸ್ವಾಮಿ

ಪೋಕ್ಸೊ ಪ್ರಕರಣದ ಆರೋಪಿ ಮುರುಘಾ ಮಠದ ಡಾ.ಶಿವಮೂರ್ತಿ ಸ್ವಾಮಿ ಸೋಮವಾರ ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾಗಿದ್ದಾರೆ;

Update: 2024-04-29 11:40 GMT
ರುಘಾ ಮಠದ ಡಾ.ಶಿವಮೂರ್ತಿ ಶರಣರು
Click the Play button to listen to article

ಚಿತ್ರದುರ್ಗ: ಪೋಕ್ಸೊ ಪ್ರಕರಣದ ಆರೋಪಿ ಮುರುಘಾ ಮಠದ ಡಾ.ಶಿವಮೂರ್ತಿ ಸ್ವಾಮಿ ಸೋಮವಾರ ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾದರು.

ಹೈಕೋರ್ಟ್ ನೀಡಿದ್ದ ಷರತ್ತು ಬದ್ಧ ಜಾಮೀನಿಗೆ ಏ.22ರಂದು ನಾಲ್ಕು ತಿಂಗಳು ತಡೆ ನೀಡಿದ ಸುಪ್ರೀಂ ಕೋರ್ಟ್, ವಾರದೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ಆದೇಶಿಸಿತ್ತು.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಶಿವಮೂರ್ತಿ ಸ್ವಾಮಿ, ಸೋಮವಾರ ಮಧ್ಯಾಹ್ನ 2.20ಕ್ಕೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾದರು. ಮಧ್ಯಾಹ್ನದ ಕಲಾಪ ಆರಂಭವಾಗುವವರೆಗೆ ನ್ಯಾಯಾಲಯದ ಆವರಣದಲ್ಲಿ ಕಾಯುತ್ತ ಕುಳಿತರು.

ಹೈಕೋರ್ಟ್ 2023ರ ನ. 8ರಂದು ನೀಡಿದ್ದ ಷರತ್ತು ಬದ್ಧ ಜಾಮೀನು ಪ್ರಶ್ನಿಸಿ ಸಂತ್ರಸ್ತೆಯ ತಂದೆಯು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ವರ್ಷದೊಳಗೆ ಮುಗಿಸಲು ಗಡುವು ನೀಡಿದೆ.

Tags:    

Similar News