ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು ಎನ್ನಲಾಗಿದೆ.

Update: 2025-12-16 06:39 GMT

ಯೂಟ್ಯೂಬ್‌ನ ಟ್ರೆಂಡಿಂಗ್ ಸ್ಟಾರ್ ಮ್ಯೂಸಿಕ್ ಮೈಲಾರಿ

Click the Play button to listen to article

ಬೆಳಗಾವಿ ಜಿಲ್ಲೆಯ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್ ಆಗಿ ಜನಪ್ರಿಯತೆ ಗಳಿಸಿದ್ದ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಮತ್ತು ಇತರ ಆರು ವ್ಯಕ್ತಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಈ ಘಟನೆ 2025ರ ಅಕ್ಟೋಬರ್ 24ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ. ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು ಎನ್ನಲಾಗಿದೆ.

ಕಾರ್ಯಕ್ರಮದ ಸಂದರ್ಭದಲ್ಲಿ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ. ಅಷ್ಟೇ ಅಲ್ಲದೆ, ಅತ್ಯಾಚಾರ ಕೃತ್ಯದ ವಿಡಿಯೋವನ್ನು ಸಹ ಚಿತ್ರೀಕರಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾಳೆ. ಈ ಅಪರಾಧದಲ್ಲಿ ಮ್ಯೂಸಿಕ್ ಮೈಲಾರಿ ಸೇರಿದಂತೆ ಒಟ್ಟು ಏಳು ಜನರು ಭಾಗಿಯಾಗಿದ್ದಾರೆ ಎಂದು ಬಾಲಕಿ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

ಡಿಸೆಂಬರ್ 14ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಂತರ ಪ್ರಕರಣವನ್ನು ಡಿಸೆಂಬರ್ 15ರಂದು ಮಹಾಲಿಂಗಪುರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಠಾಣೆಯಲ್ಲಿ ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

ಗಾಯಕ ಮ್ಯೂಸಿಕ್ ಮೈಲಾರಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಹಾಡುಗಳಿಂದ ಭಾರೀ ಜನಪ್ರಿಯತೆ ಗಳಿಸಿದ್ದರು. ಅವರ 'ಬಾಗಲಕೋಟೆ ಬಸ್ ಸ್ಟ್ಯಾಂಡ್​​​ನಾಗ' ಹಾಡು ಹೆಚ್ಚು ವೈರಲ್ ಆಗಿ ಪ್ರಸಿದ್ಧಿ ಪಡೆದಿತ್ತು.

Tags:    

Similar News