Manmohan Singh Death | ಬೆಂಗಳೂರು, ಮೈಸೂರು, ಕುವೆಂಪು ವಿವಿ ಸೆಮಿಸ್ಟರ್‌ ಪರೀಕ್ಷೆ ಮುಂದಕ್ಕೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ಡಿ.27 ರಂದು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

Update: 2024-12-27 06:59 GMT

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶೋಕಾಚರಣೆ ಅಂಗವಾಗಿ ರಾಜ್ಯ ಸರ್ಕಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ಡಿ.27 ರಂದು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬೆಂಗಳೂರು, ಶಿವಮೊಗ್ಗ, ಮೈಸೂರು ಸೇರಿದಂತೆ ಹಲವು ವಿವಿಗಳಲ್ಲಿ ಸೆಮಿಸ್ಟರ್ ಪರೀಕ್ಷೆಗಳು ನಿಗದಿಯಾಗಿದ್ದವು.

ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಮುಂದೂಡಿದ್ದು, ಪರೀಕ್ಷೆಯ ಮುಂದಿನ ದಿನಾಂಕವನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಬೆಂಗಳೂರು ವಿವಿ ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿಯ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮೈಸೂರು ವಿಶ್ವ ವಿದ್ಯಾಲಯದ ಕುಲಸಚಿವ ಎನ್.ನಾಗರಾಜ್ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ ಹಾಗೂ ನಾನ್‌ ಎನ್‌ಇಪಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷೆ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಕುವೆಂಪು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ.ಪಿ.ಧರಣಿ ಕುಮಾರ್‌ ತಿಳಿಸಿದ್ದಾರೆ.

ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ಪ್ರಧಾನಿ ಮನಮೋಹನ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ರಾಷ್ಟ್ರದಲ್ಲಿ ಏಳು ದಿನಗಳ ಶೋಕಾಚರಣೆ ಇರಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ತನ್ನೆಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದೆ. ಹಾಗಾಗಿ ಯಾವುದೇ ಕಾರ್ಯಕ್ರಮ, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

Tags:    

Similar News