ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ|ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎನ್‌ ಜಗದೀಶ್ ರಾಜೀನಾಮೆ

Update: 2024-05-09 10:39 GMT

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಪರ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ ಎನ್.ಜಗದೀಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಏ.30ರಂದು ಆದೇಶ ಹೊರಡಿಸಿತ್ತು. ಇದೀಗ ಬಿಎನ್ ಜಗದೀಶ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಪರಾಧ ತನಿಖಾ ವಿಭಾಗದ (CID) ಮುಖ್ಯಸ್ಥರಿಗೆ ಜಗದೀಶ್‌ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಚಾರಣಾ ನ್ಯಾಯಾಲಯ ಮತ್ತು ಸೆಷನ್‌ಗಳ ಮುಂದೆ ಪ್ರಾಸಿಕ್ಯೂಷನ್ ನ್ನು ಸಮರ್ಥಿಸಲು ರಾಜ್ಯ ಸರ್ಕಾರವು ಇಬ್ಬರು ಹಿರಿಯ ವಕೀಲರನ್ನು ಹೆಚ್ಚುವರಿ ಎಸ್‌ಪಿಪಿ (ಹಿರಿಯ ಪ್ರಾಸಿಕ್ಯೂಷನ್‌)ಗಳಾಗಿ ನೇಮಿಸಿದ ನಂತರ ಜಗದೀಶ್ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ವಕೀಲರಾದ ಅಶೋಕ್ ಎನ್ ನಾಯಕ್ ಮತ್ತು ಜಯ್ನಾ ಕೊಠಾರಿ ಅವರನ್ನು ಹೆಚ್ಚುವರಿ ಎಸ್‌ಪಿಪಿಗಳನ್ನಾಗಿ ನೇಮಕ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಎನ್.ಜಗದೀಶ್ ಅವರು ರಾಜೀನಾಮೆ ನೀಡಿದ್ದಾರೆ.

Tags:    

Similar News