ಪ್ರಜ್ವಲ್ ರೇವಣ್ಣ ಪ್ರಕರಣ| ಆ.1ಕ್ಕೆ ತೀರ್ಪು ಮುಂದೂಡಿದ ವಿಶೇಷ ನ್ಯಾಯಾಲಯ

ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತೀರ್ಪು ಮುಂದೂಡಿದೆ.;

Update: 2025-07-30 08:09 GMT

ಪ್ರಜ್ವಲ್‌ ರೇವಣ್ಣ

ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆ.1ಕ್ಕೆ ಮುಂದೂಡಿದೆ. 

ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಸಾಕ್ಷಿಗಳ ವಿಚಾರಣೆ ನಡೆಸಿರುವ ನ್ಯಾಯಾಲಯ ಬುಧವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಬುಧವಾರ ವಿಚಾರಣೆ ಆರಂಭವಾಗುತ್ತಿದ್ದಂತೆ ಎರಡೂ ಕಡೆಯ ವಕೀಲರಿಂದ ಸ್ಪಷ್ಟನೆ ಕೇಳಿದ ನ್ಯಾಯಾಲಯ, ಆಗಸ್ಟ್​​ 1ಕ್ಕೆ ತೀರ್ಪು ಮುಂದೂಡಿತು. 

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಕೆಲವು ಸ್ಪಷ್ಟೀಕರಣಗಳು ಬೇಕಾಗಿವೆ. ಹೀಗಾಗಿ ಇಂದು ತೀರ್ಪು ಪ್ರಕಟಿಸುತ್ತಿಲ್ಲ ಎಂದು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ತಿಳಿಸಿದ್ದಾರೆ.

ಮೈಸೂರಿನ ಕೆ.ಆರ್.ನಗರದ ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಪ್ರಜ್ವಲ್ ರೇವಣ್ಣ ಬಂಧನವಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿ ಹಾಕಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದರು. ಈಗಾಗಲೇ ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಜಾಮೀನು ಸಿಕ್ಕಿದೆ. ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಮಾತ್ರ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ.

Tags:    

Similar News