Prajwal Pendrive Case | ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ

ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಪ್ರಜ್ವಲ್ ಪರ ವಕೀಲರ ಮನವಿ ಮಾಡಿದ್ದಾರೆ. ಆದರೆ, ಆಸ್ಪತ್ರೆಗೆ ದಾಖಲಿಸಲು ಅವಕಾಶ ನೀಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ಕೋರ್ಟ್ ತಿಳಿಸಿದೆ.;

Update: 2024-06-29 12:04 GMT
ಪ್ರಜ್ವಲ್ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಾಲ್ಕು‌ ದಿನಗಳ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ಆತನನ್ನು 42ನೇ ಎಸಿಎಂಎಂ ಕೋರ್ಟ್‌ಗೆ ಶನಿವಾರ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಜುಲೈ 8 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶ ನೀಡಿದ್ದಾರೆ.

ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಪ್ರಜ್ವಲ್ ಪರ ವಕೀಲರ ಮನವಿ ಮಾಡಿದ್ದಾರೆ. ಆದರೆ, ಆಸ್ಪತ್ರೆಗೆ ದಾಖಲಿಸಲು ಅವಕಾಶ ನೀಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ಕೋರ್ಟ್ ತಿಳಿಸಿದೆ.

ಇನ್ನು ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜೂನ್‌ 26ರಂದು 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಡ್ಜ್‌ ಸಂತೋಷ್‌ ಗಜಾನನ ಭಟ್‌ ಅವರು ವಜಾಗೊಳಿಸಿದ್ದರು. ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು.

ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ, ಪ್ರಜ್ವಲ್‌ ತಂದೆ ಎಚ್‌.ಡಿ. ರೇವಣ್ಣ ಜಾಮೀನು ಪಡೆದುಕೊಂಡಿದ್ದಾರೆ. ಆದರೆ, ಪ್ರಜ್ವಲ್‌ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Tags:    

Similar News