Prajwal Revanna Case | ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ

ಇಂದು ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ ಅವರ ವಿರುದ್ಧದ ಸರಣಿ ಅತ್ಯಾಚಾರ ಪ್ರಕರಣಗಳಲ್ಲಿ ಒಂದರಲ್ಲಿ ಪೊಲೀಸ್‌ ಕಸ್ಟಡಿ ಮುಕ್ತಾಯವಾಗುತ್ತಿದ್ದು, ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುತ್ತಿದೆ. ಮತ್ತೊಂದು ಪ್ರಕರಣದಲ್ಲಿ ಅವರನ್ನು ಕಸ್ಟಡಿಗೆ ಪಡೆಯಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ.

Update: 2024-06-18 06:58 GMT
ಪ್ರಜ್ವಲ್‌ ರೇವಣ್ಣ
Click the Play button to listen to article

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ ಅವರ ವಿರುದ್ಧದ ಸರಣಿ ಅತ್ಯಾಚಾರ ಪ್ರಕರಣಗಳಲ್ಲಿ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಕಸ್ಟಡಿ ಮುಕ್ತಾಯವಾಗುತ್ತಿದ್ದು, ಮಂಗಳವಾರ ಕೋರ್ಟ್‌ಗೆ ಹಾಜರುಪಡಿಸಲಾಗುತ್ತಿದೆ. ಮತ್ತೊಂದು ಪ್ರಕರಣದಲ್ಲಿ ಅವರನ್ನು ಕಸ್ಟಡಿಗೆ ಪಡೆಯಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ.

ಈಗಾಗಲೇ ಎರಡೆರಡು ಬಾರಿ ಪ್ರಜ್ವಲ್‌ ರೇವಣ್ಣ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದ್ದಾರೆ. ಕೋರ್ಟ್‌ಗೆ ಮನವರಿಕೆ ಮಾಡಿ, ಪ್ರಜ್ವಲ್ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಎಸ್ಐಟಿ ಮುಗಿಸಿದೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಬಹುತೇಕ ಪೂರ್ಣವಾಗಿದೆ.

ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಜ್ವಲ್ ರೇವಣ್ಣನನ್ನು ಕೋರ್ಟ್‌ಗೆ ಎಸ್ಐಟಿ ಹಾಜರುಪಡಿಸಲಿದೆ. ಸಿಐಡಿಯಲ್ಲಿ ದಾಖಲಾಗಿರುವ ರೇಪ್ ಕೇಸಿನಲ್ಲಿ ಇನ್ನಷ್ಟು ತನಿಖೆ ಅಗತ್ಯವಾಗಿರುವ ಕಾರಣ ಮತ್ತೆ ಬಾಡಿ ವಾರೆಂಟ್ ಮೇಲೆ ಪ್ರಜ್ವಲ್ ರೇವಣ್ಣನನ್ನು ಕಸ್ಟಡಿಗೆ ಪಡೆಯಲು ಎಸ್‌ಐಟಿ ಕೋರ್ಟ್‌ಗೆ ಮನವಿ ಮಾಡಲಿದೆ.

10 ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ ರೇವಣ್ಣನನ್ನು ಜೂನ್‌ 10ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜೂನ್‌ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲು ಸೂಚಿಸಲಾಗಿತ್ತು. ಇನ್ನೂ ವಿಚಾರಣೆ ಬಾಕಿ ಇರುವುದರಿಂದ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಿದ್ದರಿಂದ, ಮತ್ತೆ 6 ದಿನಗಳ ಕಾಲ ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಕೋರ್ಟ್‌ ಸಮ್ಮತಿಸಿದೆ. ನ್ಯಾಯಾಂಗ ಬಂಧನದಲ್ಲಿದ್ದ ಪ್ರಜ್ವಲ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆದಿದ್ದಾರೆ. ಜೈಲಿನ ಕ್ವಾರಂಟೈನ್ ಬ್ಯಾರಕ್‌ನಲ್ಲಿ ಸಾಮಾನ್ಯ ಕೈದಿಯಂತೆ ಪ್ರಜ್ವಲ್ ಇದ್ದರು.

Tags:    

Similar News