ಮತ್ತೆ ಎಸ್ಐಟಿ ಕಸ್ಟಡಿಗೆ ಪ್ರಜ್ವಲ್ ರೇವಣ್ಣ‌

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಇದೀಗ ಮತ್ತೆ ಅವರನ್ನು ಎಸ್‌ಐಟಿ ಕಸ್ಟಡಿಗೆ ಪಡೆದುಕೊಂಡಿದೆ.;

Update: 2024-06-19 13:09 GMT
ಪ್ರಜ್ವಲ್‌ ರೇವಣ್ಣ ಅವರನ್ನು ಎಸ್‌ಐಟಿ ಮತ್ತೆ ಕಸ್ಟಡಿಗೆ ಪಡೆದುಕೊಂಡಿದೆ.

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಇದೀಗ ಮತ್ತೆ ಅವರನ್ನು ಎಸ್‌ಐಟಿ ಕಸ್ಟಡಿಗೆ ಪಡೆದುಕೊಂಡಿದೆ.

ಕೆ.ಅರ್.ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ಸ್ಥಳ ಮಹಜರು, ಹೇಳಿಕೆ ದಾಖಲು, ವಾಯ್ಸ್ ಸ್ಯಾಂಪಲ್, ವೈದ್ಯಕೀಯ ಪರೀಕ್ಷೆ ಸಲುವಾಗಿ ಎಸ್‌ ಐಟಿ ಕಸ್ಟಡಿಗೆ ನೀಡಲಾಗಿದೆ. 3ನೇ ಕೇಸ್‌ನಲ್ಲಿ ವಿಚಾರಣೆ ನಡೆಸಲು ತನಿಖಾಧಿಕಾರಿಗಳು ಬಾಡಿ ವಾರಂಟ್ ಮೇಲೆ ಮತ್ತೆ ಎಸ್‌ಐಟಿ ಕಸ್ಟಡಿಗೆ ಪಡೆದಿದ್ದಾರೆ.

ನೆನ್ನೆ (ಜೂನ್‌ 18) ಕೋರ್ಟ್ ವಿಚಾರಣೆ ವೇಳೆ ಎಸ್‌ಐಟಿ (SIT) ಅಧಿಕಾರಿಗಳು ತನ್ನ ಆರೋಗ್ಯ ಸಮಸ್ಯೆಯನ್ನು ಕಡೆಗಣಿಸಿದ್ದಾರೆ ಎಂದು ಪ್ರಜ್ವಲ್‌ ದೂರಿದ್ದು ವರದಿಯಾಗಿತ್ತು. ಪ್ರಜ್ವಲ್ ರೇವಣ್ಣ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಎಸ್‌ಐಟಿ ಕೋರ್ಟ್‌ಗೆ ಹಾಜರು ಪಡಿಸಿದಾಗ, “ಏನಾದ್ರೂ ಆರೋಗ್ಯ ಸಮಸ್ಯೆ ಇದೆಯಾ?ʼʼ ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದರು. ಇದಕ್ಕೆ “ಹೌದು ಸರ್” ಎಂದು ಪ್ರಜ್ವಲ್ ನುಡಿದಿದ್ದರು.

“ಎಸ್ಐಟಿ ಅಧಿಕಾರಿಗಳು ಸರಿಯಾಗಿ ನೋಡ್ಕೋತಿಲ್ಲ” ಎಂದು ಪ್ರಜ್ವಲ್ ಹೇಳಿದ್ದಲ್ಲದೆ, “ಎಂಆರ್‌ಐ ಸ್ಕ್ಯಾನ್ ಮಾಡಿಸಿದ್ದೇನೆ. ಟ್ಯಾಬ್ಲೆಟ್ ತೆಗೆದುಕೊಳ್ತಿದ್ದೇನೆ” ಎಂದು ಹೇಳಿದಾಗ, ʼಆರೋಗ್ಯ ತಪಾಸಣೆ ಯಾಕೆ ಮಾಡಿಸಿಲ್ಲ?ʼ ಎಂದು ಅಧಿಕಾರಿಗಳನ್ನು ಜಡ್ಜ್ ಪ್ರಶ್ನಿಸಿದ್ದರು. “ಅವರು ಈಗ ಹೇಳ್ತಾ ಇದ್ದಾರೆ, ನಮಗೆ ಹೇಳಿಲ್ಲ” ಎಂದು ಎಸ್ಐಟಿ ಅಧಿಕಾರಿಗಳು ಉತ್ತರಿಸಿದ್ದರು. ಇದೀಗ ಬಾಡಿ ವಾರಂಟ್ ಮೇಲೆ ಅವರನ್ನು ಮತ್ತೆ ಕಸ್ಟಡಿಗೆ ಪಡೆಯಲಾಗಿದೆ.

Tags:    

Similar News