ಫಲಿಸದ ನಿರೀಕ್ಷಣಾ ಜಾಮೀನು ಯತ್ನ; ಪ್ರಜ್ವಲ್ ಬಂದರೆ ಬಂಧನ ಖಚಿತ
ಪ್ರಜ್ವಲ್ ಅವರು ಗುರುವಾರ ಮಧ್ಯರಾತ್ರಿ ಮೇ 30ರಂದು 12.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದೇ ಆದರೆ, ಅವರನ್ನು ಬಂಧಿಸಲು ಎಸ್‍ಐಟಿ ಅಧಿಕಾರಿಗಳು ಕೆಐಎಎಲ್‍ನಲ್ಲೇ ಬೀಡು ಬಿಟ್ಟಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಮ್ಯೂನಿಚ್‍ನಿಂದ ಅಪರಾಹ್ನ 3.30ಕ್ಕೆ ಹೊರಡುವ ಲುಫ್ತಾನ್ಸಾ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಕಾದಿರಿಸಿದ್ದು, ಟಿಕೆಟ್ ಬುಕ್ಕಿಂಗ್‍ಗೆ ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ ನಮೂದಿಸಿಲ್ಲ;
ಯೂರೋಪ್ ದೇಶಗಳಲ್ಲಿ ತಲೆಮರೆಸಿಕೊಂಡಿರುವ ಅತ್ಯಾಚಾರ ಮತ್ತು ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಮೇ 31ಕ್ಕೆ ಬೆಂಗಳೂರಿಗೆ ಆಗಮಿಸುವುದಾಗಿ ವೀಡಿಯೋ ಹೇಳಿಕೆ ನೀಡಿದ ಬಳಿಕ ಜರ್ಮನ್ ಮ್ಯೂನಿಚ್‍ನಿಂದ ಬೆಂಗಳೂರಿಗೆ ವಿಮಾನದ ಟಿಕೆಟ್ ಬುಕ್ಕಿಂಗ್ ಮಾಡಿರುವುದು ಗೊತ್ತಾಗಿದೆ.
ಪ್ರಜ್ವಲ್ ಅವರು ಗುರುವಾರ ಮಧ್ಯರಾತ್ರಿ ಮೇ 30ರಂದು 12.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದೇ ಆದರೆ, ಅವರನ್ನು ಬಂಧಿಸಲು ಎಸ್‍ಐಟಿ ಅಧಿಕಾರಿಗಳು ಕೆಐಎಎಲ್‍ನಲ್ಲೇ ಬೀಡು ಬಿಟ್ಟಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಮ್ಯೂನಿಚ್‍ನಿಂದ ಅಪರಾಹ್ನ 3.30ಕ್ಕೆ ಹೊರಡುವ ಲುಫ್ತಾನ್ಸಾ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಕಾದಿರಿಸಿದ್ದು, ಟಿಕೆಟ್ ಬುಕ್ಕಿಂಗ್‍ಗೆ ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ ನಮೂದಿಸಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಹೇಳಿದ್ದಾರೆ.
ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್ ಬಂಧನಕ್ಕೆ ವಾರಂಟ್ ಸಹಿತ ಕಾದಿರುವ ಎಸ್ಐಟಿ ಪೊಲೀಸರು ವಿಮಾನ ನಿಲ್ದಾಣಕ್ಕೆ ಬಂದಿಳಿದ ತಕ್ಷಣ ವಶಕ್ಕೆ ಪಡೆಯಲಿದ್ದಾರೆ. ಪ್ರಜ್ವಲ್ ವಿರುದ್ಧ ಈಗಾಗಲೇ ಲುಕ್‍ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಹಾಗೂ ಬಂಧನದ ವಾರಂಟ್ ಜಾರಿಯಾಗಿದೆ. ಹಾಗಾಗಿ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಅಧಿಕಾರಿಗಳು ವಶಕ್ಕೆ ಪಡೆದು ಎಸ್‌ಐಟಿ ಪೊಲೀಸರಿಗೆ ಒಪ್ಪಿಸಲು ಸಿದ್ಧವಾಗಿದ್ದಾರೆ.
ಈ ನಡುವೆ ಬಂಧನ ಭೀತಿ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದಲೇ ತನ್ನ ವಕೀಲ ಅರುಣ್ ಮೂಲಕ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರೂ ಅರ್ಜಿ ವಿಚಾರಣೆಯನ್ನು ಶುಕ್ರವಾರಕ್ಕೆ (ಮೇ 31) ಮುಂದೂಡಿದೆ. ಬಂಧನ ತಪ್ಪಿಸಲು ನಡೆಸಿದ ಪ್ರಜ್ವಲ್ ಯತ್ನಕ್ಕೆ ಫಲ ಸಿಕ್ಕಿಲ್ಲ. ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ಯತ್ನಿಸಿದರೂ ಅದಕ್ಕೆ ನ್ಯಾಯಾಲಯ ಸಮ್ಮತಿಸದೆ ಇರುವುದು ಪ್ರಜ್ವಲ್ ಬಂಧನ ಪ್ರಕ್ರಿಯೆಯನ್ನು ಸರಳಗೊಳಿಸಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.