ವಕ್ಫ್ ಪ್ರತಿಭಟನೆ | ಪ್ರಮೋದ್ ಮುತಾಲಿಕ್ ಪೊಲೀಸರ ವಶಕ್ಕೆ

ರಾಜ್ಯದಲ್ಲಿ ವಕ್ಫ್ ವಿವಾದ ತಾರಕ್ಕೇರಿದ್ದು, ವಕ್ಫ್ ಸಚಿವ ಜಮೀರ್ ಅಹಮದ್ ಖಾನ್‌ ಕಚೇರಿಗೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮುತ್ತಿಗೆ ಹಾಕಲು ಮುಂದಾಗಿದ್ದ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Update: 2024-11-22 11:05 GMT
ಪ್ರಮೋದ್‌ ಮುತಾಲಿಕ್‌ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ ವಕ್ಫ್  ವಿವಾದ ತಾರಕ್ಕೇರಿದ್ದು, ವಕ್ಫ್ ಸಚಿವ ಜಮೀರ್ ಅಹಮದ್ ಖಾನ್‌ ಅವರ ಬೆಂಗಳೂರಿನ ಕಚೇರಿಗೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮುತ್ತಿಗೆ ಹಾಕಲು ಮುಂದಾಗಿದ್ದ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದರು. 

ವಕ್ಫ್ ಆಸ್ತಿ ಎಂದು ರಾಜ್ಯಾದ್ಯಂತ ರೈತರಿಗೆ ನೋಟಿಸ್​ ನೀಡಿರುವ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆಗಳ ನಡುವೆ ಪ್ರಮೋದ್ ಮುತಾಲಿಕ್ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರ ಬೆಂಗಳೂರಿನ ಚಾಮರಾಜಪೇಟೆಯ ಶಾಸಕರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಆದರೆ ಅವರ ಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದು, ಪ್ರಮೋದ್ ಮುತಾಲಿಕ್ ಹಾಗೂ ಬೆಂಬಲಿಗರನ್ನು ವಶಕ್ಕೆ ಪಡೆದರು. 

ಶ್ರೀರಾಮ ಸೇನೆಯಿಂದ ವಕ್ಫ್ ವಿರುದ್ಧ ಶುಕ್ರವಾರ ಹೋರಾಟ ನಡೆಯುತ್ತಿತ್ತು. ಚಾಮರಾಜಪೇಟೆ ಆಟದ ಮೈದಾನ ಬಳಿಯ ಮಹದೇಶ್ವರ ದೇವಾಲಯದಲ್ಲಿ ಪೂಜೆ ಮಾಡಿ ಬಳಿಕ ಸಚಿವ ಜಮೀರ್ ಅಹ್ಮದ್ ಕಚೇರಿಗೆ ಕಾಲ್ನಡಿಗೆಯಲ್ಲಿ ತೆರಳಿ ಮನವಿ ಪತ್ರ ಸಲ್ಲಿಕೆ ಮಾಡುವುದಾಗಿ ಪೊಲೀಸರಿಂದ ಅನುಮತಿ ಕೇಳಿದ್ದರು. ಪ್ರಮೋದ್‌ ಮುತಾಲಿಕ್‌ ತಮ್ಮ ಕಾರ್ಯಕರ್ತರೊಂದಿಗೆ ದೊಡ್ಡ ಪ್ರಮಾಣದಲ್ಲಿ ರ್ಯಾಲಿ ನಡೆಸಿ ಸಚಿವ ಜಮೀರ್ ಅಹಮದ್ ಖಾನ್ ಅವರ ಚಾಮರಾಜಪೇಟೆಯ ಶಾಸಕರ ಕಚೇರಿಗೆ ಮುತ್ತಿಗೆ ಹಾಕುವುದಕ್ಕೆ ಮುಂದಾಗಿದ್ದರು. ಇದನ್ನು ಅರಿತ ಪೊಲೀಸರು ಪ್ರಮೋದ್‌ ಮುತಾಲಿಕ್‌ ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. 

ವಕ್ಫ್ ನೋಟಿಸ್​ಗಳ ವಿರುದ್ಧ ರಾಜ್ಯದಾದ್ಯಂತ ಬಿಜೆಪಿ  ‘ನಮ್ಮ ಭೂಮಿ, ನಮ್ಮ ಹಕ್ಕುʼ ಘೋಷಣೆಯಡಿ ಪ್ರತಿಭಟನೆ ನಡೆಸುತ್ತಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

Tags:    

Similar News