ಅಂಕೋಲಾ ಬಳಿ ಭೀಕರ ಅಪಘಾತ: ಹಳ್ಳಕ್ಕೆ ಉರುಳಿದ ಖಾಸಗಿ ಬಸ್, ಒಬ್ಬ ಸಾವು, ಹಲವರು ಗಂಭೀರ
ಬಸ್ಸಿನಲ್ಲಿದ್ದ 18 ಜನರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಅಂಕೋಲಾ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.;
ಬೆಳಗಾವಿಯಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಪರಿಣಾಮ ಪ್ರಯಾಣಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟು, 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದಾರುಣ ಘಟನೆ ತಾಲೂಕಿನ ಅಗಸೂರು ಬಳಿ ಸೋಮವಾರ ನಸುಕಿನ ಜಾವ ಸಂಭವಿಸಿದೆ.
ಬೆಳಗಾವಿಯಿಂದ ಪ್ರಯಾಣಿಕರನ್ನು ಹೊತ್ತು ಮಂಗಳೂರಿನತ್ತ ತೆರಳುತ್ತಿದ್ದ ಬಸ್, ಸೋಮವಾರ ಬೆಳಗಿನ ಜಾವ ಸುಮಾರು 2 ಗಂಟೆಯ ಸಮಯದಲ್ಲಿ ಅಗಸೂರು ಬಳಿಯ ಕಿರು ಸೇತುವೆಗೆ ಡಿಕ್ಕಿ ಹೊಡೆದಿದೆ. ರಭಸಕ್ಕೆ ಸೇತುವೆಯ ತಡೆಗೋಡೆ ಮುರಿದು ಬಸ್ಸು ಹಳ್ಳಕ್ಕೆ ಉರುಳಿದೆ. ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ.
ಬಸ್ಸಿನಲ್ಲಿದ್ದ 18 ಜನರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಅಂಕೋಲಾ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅಂಕೋಲಾ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ