ಏಕಾಏಕಿ ಮಕ್ಕಳ ಶಾಲಾ ಶುಲ್ಕ ಹೆಚ್ಚಳ: ಶಾಲೆಗೆ ಮುತ್ತಿಗೆ ಹಾಕಿದ ಪೋಷಕರು

ಶಾಲೆಯ ಬಳಿ‌ ಜಮಾಯಿಸಿದ್ದ ಪೋಷಕರು ಏಕಾಏಕಿ ಫೀಸ್​ 20 ರಿಂದ 25 ಸಾವಿರ ರೂ ಹೆಚ್ಚಳ ಮಾಡಿರುವುದನ್ನ ಖಂಡಿಸಿ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.;

Update: 2025-04-09 07:51 GMT

ಎಐ ರಚಿತ ಚಿತ್ರ.

ಬೆಂಗಳೂರಿನ ಖಾಸಗಿ ಶಾಲೆಯೊಂದರ ಪ್ರವೇಶ ಶ಼ುಲ್ಕ ಏಕಾಏಕಿ ಹೆಚ್ಚಳಗೊಂಡಿದ್ದರಿಂದ ಆಕ್ರೋಶಗೊಂಡ ಪೋಷಕರು ಶಾಲೆಗೆ ಮುತ್ತಿಗೆ ಹಾಕಿ ಆಡಳಿತ ಮಂಡಳಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಘಟನೆ ಬುಧವಾರ ನಡೆದಿದೆ. 

ಬೆಂಗಳೂರು ಉತ್ತರ ತಾಲೂಕಿನ ಹೊಸಹಳ್ಳಿ ಗ್ರಾಮದ ಎಂವಿಎಂ ಶಾಲೆಯಲ್ಲಿ ಸುಮಾರು 850 ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಕಳೆದ ಬಾರಿಗಿಂತ ಈ ಬಾರಿ ಶಾಲೆಯ ಶುಲ್ಕ ಶೇ.20 ರಿಂದ 25 ಹೆಚ್ಚಳ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಕಳೆದ ವರ್ಷ ಎಲ್​​ಕೆಜಿಗೆ 75 ಸಾವಿರ ರೂ. ತೆಗೆದುಕೊಂಡಿದ್ದ ಶಾಲಾ ಆಡಳಿತ ಮಂಡಳಿ ಮುಂದಿನ ಭಾರಿ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ ಈ ಬಾರಿ ಮಕ್ಕಳ ಶಾಲಾ ಶುಲ್ಕವನ್ನ 20 ಸಾವಿರ ರೂಪಾಯಿ ಹೆಚ್ಚಳ ಮಾಡಿದ್ದಾರೆ. ಜೊತೆಗೆ ಮಕ್ಕಳ ವ್ಯಾನ್ ಶುಲ್ಕ ಕೂಡ ಹೆಚ್ಚಳ ಮಾಡಿದ್ದಾರೆ. ಇದು ಗೊತ್ತಿದ್ದರೂ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿದೆ,'' ಎಂದು ವಿದ್ಯಾರ್ಥಿಯೊಬ್ಬರ ತಂದೆ  ಶಂಕರ್ ಎಂಬುವರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಖಾಸಗಿ ವಾಹಿನಿಗಳು ವರದಿ ಮಾಡಿವೆ. 

ಈಗಾಗಲೇ ರಾಜ್ಯದಲ್ಲಿ ಅಗತ್ಯ ವಸ್ತುಗಳಾದ ಹಾಲು, ಮೊಸರು, ಬಸ್‌, ಮೆಟ್ರೋ ಪ್ರಯಾಣ ದರ ಏರಿಕೆಯಾಗಿದ್ದು, ಕೆಲ ಖಾಸಗಿ ಶಾಲೆಗಳು ಶುಲ್ಕ ಹೆಚ್ಚಳ ಮಾಡಿರುವುದು ಪೋಷಕರಿಗೆ ಗಾಯದ ಮೇಲೆ‌ ಬರೆ ಎಳೆದಂತಾಗಿದೆ. 

Tags:    

Similar News