ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಅಮಾನತು
ಪ್ರಾಧ್ಯಾಪಕ ಕೆ.ಎಲ್ .ಎನ್ ಮೂರ್ತಿ ಅವರು ತನಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿರುವುದಾಗಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ಆರೋಪ ಮಾಡಿದ್ದರು.;
ರಾಣಿಚನ್ನಮ್ಮ ವಿಶ್ವ ವಿದ್ಯಾನಿಲಯದ ಪ್ರಾಧ್ಯಾಪಕರಾಗಿದ್ದ ಕೆ.ಎಲ್.ಎನ್. ಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.
ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲ ಸಚಿವರಾಗಿದ್ದ, ಸದ್ಯ ರಾಣಿಚನ್ನಮ್ಮ ವಿಶ್ವ ವಿದ್ಯಾನಿಲಯದ ಪ್ರಾಧ್ಯಾಪಕರಾಗಿದ್ದ ಕೆ.ಎಲ್.ಎನ್. ಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.
ವಿಜಯಪುರ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರಾಗಿದ್ದ ಪ್ರೊ.ಕೆ.ಎಲ್ .ಎನ್ ಮೂರ್ತಿ ಅವರನ್ನು ರಾಣಿಚನ್ನಮ್ಮ ವಿಶ್ವ ವಿದ್ಯಾನಿಲಯದ ಕುಲಸಚಿವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಾಧ್ಯಾಪಕ ಕೆ.ಎಲ್ .ಎನ್ ಮೂರ್ತಿ ಅವರು ತನಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿರುವುದಾಗಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ಆರೋಪ ಮಾಡಿದ್ದರು. ಈ ಸಂಬಂಧ ವಿಚಾರಣೆ ಮಾಡಿ ವರದಿಯನ್ನು ಸಲ್ಲಿಸಲು ಆಂತರಿಕ ದೂರು ನಿವಾರಣಾ ಸಮಿತಿಗೆ ಸೂಚನೆ ನೀಡಲಾಗಿತ್ತು.
ಇದೀಗ ಆಂತರಿಕ ದೂರು ನಿವಾರಣಾ ಸಮಿತಿ ಅಂತಿಮ ವರದಿ ಸಲ್ಲಿಸಿದ್ದು, ಆರೋಪಿತ ಪ್ರಾಧ್ಯಾಪಕರು ತಮ್ಮ ಅಧಿಕಾರ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದು ಮತ್ತು ಅವರ ನಡವಳಿಕೆಯು POSH ಕಾಯ್ದೆಯ ಪ್ರಕಾರ ಲೈಂಗಿಕ ಕಿರುಕುಳಕ್ಕೆ ಕಾರಣವಾಗಿದೆ. ಕಾರಣ ಶಿಸ್ತು ಕ್ರಮ ಸಮರ್ಥನೀಯವಾಗಿದ್ದು, ಘಟನೆ ಮರುಕಳಿಸುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಂತಿಮ ವರದಿಯಲ್ಲಿ ತಿಳಿಸಲಾಗಿತ್ತು.
ಇದೀಗ ಮೂರ್ತಿ ಅವರ ಮೇಲಿನ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಆಂತರಿಕ ದೂರು ನಿವಾರಣಾ ಸಮಿತಿ ವರದಿ ಆಧರಿಸಿ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇತಿಹಾಸ ವಿಭಾಗದ ಪ್ರಾಧ್ಯಾಪಕ ಹುದ್ದೆಯಿಂದ ಅಮಾನತುಗೊಳಿಸಿ ಕುಲಸಚಿವರು ಆದೇಶಿಸಿದ್ದಾರೆ.