PSI Exam | 545 ಪಿಎಸ್‌ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಹೈಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿರುವ ರಿಟ್ ಅರ್ಜಿಯ ಅಂತಿಮ ತೀರ್ಪಿಗೆ ತಾತ್ಕಾಲಿಕ‌ ಆಯ್ಕೆ ಪಟ್ಟಿ ಒಳಪಟ್ಟಿದೆ ಎಂದು ಗೃಹ ಇಲಾಖೆ ಸ್ಪಷ್ಟಪಡಿಸಿದೆ.;

Update: 2024-10-22 01:54 GMT

545 ಪೊಲೀಸ್ ಸಬ್ ಇನ್ ಸ್ಪೆಕ್ಟರ್ (ಪಿಎಸ್ಐ) ಹುದ್ದೆಗಳಿಗೆ ಕರ್ನಾಟಕ‌ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಪರೀಕ್ಷೆಯ ತಾತ್ಕಾಲಿಕ ಆಯ್ಕೆ‌ ಪಟ್ಟಿಯನ್ನು ಗೃಹ ಇಲಾಖೆ ಸೋಮವಾರ ಪ್ರಕಟಿಸಿದೆ.

ಪಿಎಸ್ಐ ಹುದ್ದೆಗಳಿಗೆ 2021ರಲ್ಲಿ ಗೃಹ ಇಲಾಖೆ ಅಧಿಸೂಚನೆ ಹೊರಡಿಸಿತ್ತು. 2022ರ ನ.3ರಂದು ಪೊಲೀಸ್‌ ನೇಮಕಾತಿ‌ ಮಂಡಳಿ ಪರೀಕ್ಷೆ ನಡೆಸಿತ್ತು. ಪರೀಕ್ಷೆಯಲ್ಲಿ ಅಕ್ರಮ ನಡೆದ ಕಾರಣ 545 ಮಂದಿಯ ತಾತ್ಕಾಲಿಕ ಪಟ್ಟಿಯನ್ನು ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಕ್ರಮ‌ ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಮರುಪರೀಕ್ಷೆಗೆ ಆದೇಶಿಸಿತ್ತು.

 ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮರು ಪರೀಕ್ಷೆ ನಡೆಸಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಗೃಹ ಇಲಾಖೆಗೆ ಸಲ್ಲಿಸಿತ್ತು. ಆದರೆ ಹೈದರಾಬಾದ್ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಗೊಂದಲ ಉಂಟಾಗಿದ್ದರಿಂದ ಆಯ್ಕೆ ಪಟ್ಟಿ ಪ್ರಕಟಿಸಿರಲಿಲ್ಲ.

ಅಂತಿಮವಾಗಿ ಹೈ-ಕ ಅಭ್ಯರ್ಥಿಗಳ ಮೀಸಲಾತಿಗೆ ಸಂಬಂಧಿಸಿ 2023 ಫೆಬ್ರವರಿ 1 ರಂದು ಹೊರಡಿಸಿದ್ದ ಸುತ್ತೋಲೆಯಂತೆ ಗೃಹ ಇಲಾಖೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ.

ಇನ್ನು 2020ರ ಜೂನ್ 6 ರಂದು ಹೊರಡಿಸಿದ್ದ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿದ 40 ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ ಈ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಹೈಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿರುವ ರಿಟ್ ಅರ್ಜಿಯ ಅಂತಿಮ ತೀರ್ಪಿಗೆ ತಾತ್ಕಾಲಿಕ‌ ಆಯ್ಕೆ ಪಟ್ಟಿ ಒಳಪಟ್ಟಿದೆ ಎಂದು ಗೃಹ ಇಲಾಖೆ ಸ್ಪಷ್ಟಪಡಿಸಿದೆ.

Tags:    

Similar News