ಗೊಂದಲಕ್ಕೆ ಕೊನೆಗೂ ತೆರೆ | ಅಕ್ಟೋಬರ್ 3ರಂದು ಪಿಎಸ್‌ಐ ನೇಮಕಾತಿ ಪರೀಕ್ಷೆ

ರಾಜ್ಯದಲ್ಲಿ ಸೆ.22ರಂದು ನಿಗದಿಯಾಗಿದ್ದ ಪಿಎಸ್‌ಐ ಪರೀಕ್ಷೆಯನ್ನು ಸೆ.28ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಮತ್ತೆ ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಅಕ್ಟೋಬರ್ 3ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.;

Update: 2024-09-14 07:02 GMT
ಡಾ. ಜಿ ಪರಮೇಶ್ವರ
Click the Play button to listen to article

ರಾಜ್ಯದಲ್ಲಿ ಸೆ.22ರಂದು ನಿಗದಿಯಾಗಿದ್ದ ಪಿಎಸ್‌ಐ ಪರೀಕ್ಷೆಯನ್ನು ಸೆ.28ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಮತ್ತೆ ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಅಕ್ಟೋಬರ್ 3ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ. 

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕರು ಮತ್ತು ಪೊಲೀಸ್ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ನಡೆಸಿದ ಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರಲಾಗಿದೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಿ.ಪರಮೇಶ್ವರ್‌, 402 ಪಿಎಸ್‌ಐ ಹುದ್ದೆಗಳಿಗೆ ಮೊದಲಿಗೆ ಸೆ.22ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಪರೀಕ್ಷೆ ಮುಂದೂಡಬೇಕೆಂಬ ಒತ್ತಾಯ ಎದುರಾಗಿದ್ದರಿಂದಾಗಿ ಸೆ.28 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆ ದಿನ ಯುಪಿಎಸ್‌ಸಿಯ ಇಂಗ್ಲಿಷ್ ಕಡ್ಡಾಯ ಪರೀಕ್ಷೆ ಇರುವುದರಿಂದ ಅಂತಿಮವಾಗಿ ಅ.3ಕ್ಕೆ ನಡೆಸಲು ತೀರ್ಮಾನಿಸಲಾಗಿದೆ. ಅಕ್ಟೋಬರ್ 3ರಂದು ಪಿಎಸ್‌ಐ ನೇಮಕಾತಿ ಪರೀಕ್ಷೆಕೆ ಇಎ ಅವರು ಅಧಿಕೃತವಾಗಿ ಪ್ರಕಟಣೆ ಹೊರಡಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Tags:    

Similar News