PUC Result | ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ವಿದ್ಯಾರ್ಥಿಗಳಿಗೆ ತಮಗೆ ಬರಬೇಕಾದ ಅಂಕ ಬಂದಿಲ್ಲ ಅಥವಾ ಸಂದೇಹಗಳಿದ್ದರೆ, ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.;
ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ ಬರೆದ ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ.
2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳಿಗೆ ತಮಗೆ ಬರಬೇಕಾದಷ್ಟು ಅಂಕ ಬಂದಿಲ್ಲ ಅಥವಾ ಸಂದೇಹಗಳಿದ್ದರೇ, ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಮೌಲ್ಯಮಾಪನ ಮಂಡಳಿ ಹೇಳಿದೆ.
ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಯನ್ನು ಪಡೆಯಲು ಏ.16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಏ.19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏ.14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮರುಮೌಲ್ಯಮಾಪನ 2024 ಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಅಧಿಕೃತ ವೆಬ್‌ಸೈಟ್ – kseab.karnataka.gov.in ಗೆ ಭೇಟಿ ನೀಡಿ
ಸ್ಕ್ಯಾನ್ ಮಾಡಿದ ಪ್ರತಿಗಳ ಅರ್ಜಿ ನಮೂನೆಗಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ
ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ
ಫಾರ್ಮ್ ಜೊತೆಗೆ ಅರ್ಜಿ ಶುಲ್ಕವನ್ನು ಸಲ್ಲಿಸಿ
ಭವಿಷ್ಯದ ಉಲ್ಲೇಖಕ್ಕಾಗಿ ಸ್ವೀಕೃತಿ ಫಾರ್ಮ್ ಡೌನ್‌ಲೋಡ್ ಮಾಡಿ
ಮರುಮೌಲ್ಯಮಾಪನ ಅರ್ಜಿಯುನ್ನು ಕೂಡ ಮೇಲೆ ತಿಳಿಸಿದ ವಿಧಾನದ ಮೂಲಕ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್ ಮಾಡಿದ ಪ್ರತಿಗೆ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ.
ರಾಜ್ಯದಾದ್ಯಂತ ಮಾ.1ರಿಂದ ಮಾರ್ಚ್ 22ರವರೆಗೆ 1,124 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಪ್ರಸಕ್ತ ವರ್ಷ 6.9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3.3 ಲಕ್ಷ ವಿದ್ಯಾರ್ಥಿಗಳು, 3.6 ಲಕ್ಷ ವಿದ್ಯಾರ್ಥಿನಿಯರು ಹಾಜರಾಗಿದ್ದರು. ಇದೀಗ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು, ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಶೇ.97.37 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶೇ.96.80 ಫಲಿತಾಂಶ ಪಡೆದಿರುವ ಉಡುಪಿ ದ್ವಿತೀಯ ಸ್ಥಾನದಲ್ಲಿದೆ.