ರಾಹುಲ್‌ ಗಾಂಧಿ ಪ್ರತಿಭಟನೆ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಪ್ರಕಟಿಸಿದ ಪೊಲೀಸ್‌ ಇಲಾಖೆ

ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಠಿಯಿಂದ ಪೊಲೀಸ್‌ ಇಲಾಖೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ.;

Update: 2025-08-07 14:24 GMT
ಬೆಂಗಳೂರು ಸಂಚಾರ ಪೊಲೀಸರು ಹೊರಡಿಸಿರುವ ಪತ್ರಿಕಾ ಪ್ರಕಟಣೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದು, ನಗರದ ಉದ್ಯಾನವನದಲ್ಲಿ ʼಮತಕಳವುʼ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ನಂತರ ಕಾಲ್ನಡಿಗೆಯಲ್ಲಿ ತೆರಳಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದ್ದಾರೆ.

ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಭಾಗವಹಿಸಲಿದ್ದು, ಸಾವಿರಾರು ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಪೊಲೀಸ್‌ ಇಲಾಖೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ.

ಶಾಂತಲಾ ಜಂಕ್ಷನ್ ಮತ್ತು ಖೋಡೆ ಸರ್ಕಲ್‌ನಿಂದ ಆನಂದ ರಾವ್ ಪ್ಲೈ ಓವರ್, ಓಲ್ಡ್ ಜೆಡಿಎಸ್ ಕ್ರಾಸ್, ಶೇಷಾದ್ರಿ ರಸ್ತೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು ಲುಲು ಮಾಲ್, ಕೆಎಫ್‌ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕಲ್, ರೇಸ್ ಕೋರ್ಸ್ ಪೈ ಓವರ್, ರೇಸ್ ಕೋರ್ಸ್ ರಸ್ತೆ ಮೂಲಕ ಸಂಚರಿಸಬೇಕು.

ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ ಹೋಗುವ ವಾಹನ ಸವಾರರು, ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆಎಫ್‌ಎಂ, ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರು ಸರ್ಕಲ್, ರೇಸ್ ಕೋರ್ಸ್ ಪ್ಲೈ ಓವರ್ ರಸ್ತೆ ಮೂಲಕ ಸಂಚರಿಸುವುದು.

ಚಾಲುಕ್ಯ ಸರ್ಕಲ್‌ನಿಂದ ಮೈಸೂರು ಬ್ಯಾಂಕ್ ಕಡೆಗೆ ಸಂಚರಿಸುವ ವಾಹನ ಸವಾರರು, ಚಾಲುಕ್ಯ ಸರ್ಕಲ್, ಎಲ್‌ಆರ್‌ಡಿ, ರಾಜಭವನ ರಸ್ತೆ, ಇನ್​​ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್ ಮೂಲಕ ತೆರಳಬಹುದು. 

ಕಾಳಿದಾಸ ರಸ್ತೆ, ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು ಕನಕದಾಸ ಜಂಕ್ಷನ್ ಬಲ ತಿರುವು ಪಡೆದು ಸಾಗರ ಜಂಕ್ಷನ್ ಕಡೆಗೆ ಸಂಚರಿಸಬೇಕು. 

ಮೌರ್ಯ ಅಥವಾ ಸುಬ್ಬಣ್ಣ ಜಂಕ್ಷನ್‌ನಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು, ಸುಬ್ಬಣ್ಣ ಜಂಕ್ಷನ್‌ನಿಂದ ಬಲ ತಿರುವು ಪಡೆದು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ ಎಂದು ನಗರ ಪೊಲೀಸರು ತಿಳಿಸಿದ್ದಾರೆ. 

Tags:    

Similar News