ರೈಲ್ವೆ ಪರೀಕ್ಷೆಯನ್ನು ಇನ್ನು ಕನ್ನಡದಲ್ಲೂ ಬರೆಯಬಹುದು: ಕೇಂದ್ರ ಸರ್ಕಾರಕ್ಕೆ ತಲುಪಿದ ಕನ್ನಡದ ಕೂಗು

ರೈಲ್ವೆಯಲ್ಲಿ ವಿವಿಧ ಹುದ್ದೆಗಳಿಗೆ ನಡೆಸುವ ನೇಮಕಾತಿಗಳಲ್ಲಿ ಕಂಪ್ಯೂಟ‌ರ್ ಆಧಾರಿತ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ 15 ಭಾಷೆಗಳಲ್ಲಿ ನಡೆಸಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.;

Update: 2025-08-21 05:47 GMT

ಸಾಂದರ್ಭಿಕ ಚಿತ್ರ

ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಗಳನ್ನು ಕೇವಲ ಹಿಂದಿ ಹಾಗೂ ಆಂಗ್ಲ ಭಾಷೆಯಲ್ಲಿ ಮಾತ್ರವಲ್ಲದೆ, ಪ್ರಾದೇಶಿಕ ಭಾಷೆಗಳಲ್ಲಿಯೂ ಪರೀಕ್ಷೆ ನಡೆಸಬೇಕು ಎಂಬ ಕೂಗು ಕೇಂದ್ರ ಸರ್ಕಾರಕ್ಕೆ ಮುಟ್ಟಿದೆ. 

ಭಾರತೀಯ ರೈಲ್ವೆಯಲ್ಲಿ ವಿವಿಧ ಹುದ್ದೆಗಳಿಗೆ ನಡೆಸುವ ನೇಮಕಾತಿಗಳಲ್ಲಿ ಕಂಪ್ಯೂಟ‌ರ್ ಆಧಾರಿತ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ 15 ಭಾಷೆಗಳಲ್ಲಿ ನಡೆಸಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಪ್ರಶೋತ್ತರ ಅವಧಿಯಲ್ಲಿ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಪ್ರಶ್ನೆಗೆ ಉತ್ತರಿಸಿದ ಅವರು, 'ಅರ್ಜಿ ಸಲ್ಲಿಸುವ ಎಲ್ಲರನ್ನೂ ಸಮಾನವಾಗಿ ಪರಿಗಣಿಸಲಾಗುತ್ತದೆ. ಯಾವುದೇ ರಾಜ್ಯ ಅಥವಾ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವುದಿಲ್ಲ' ಎಂದು ಸ್ಪಷ್ಟ ಪಡಿಸಿದರು.

ರೈಲ್ವೆ ಇಲಾಖೆಯ ವಿವಿಧ ನೇಮಕಾತಿಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಹದಿನೈದು ಭಾಷೆಗಳ ಪೈಕಿ ಯಾವುದಾದರೂ ಒಂದು ಪರೀಕ್ಷಾ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳಬೇಕು ಹಾಗೂ ಆಯ್ಕೆ ಮಾಡಿಕೊಂಡ ಭಾಷೆಯಲ್ಲಿಯೇ ಪರೀಕ್ಷೆ ಬರೆಯಬೇಕು ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಹುದ್ದೆಗಳನ್ನು ಪ್ರಾದೇಶಿಕ ಭಾಷೆಯಲ್ಲಿ ನಡೆಸಬೇಕು ಎಂದು ಹಲವಾರು ವರ್ಷಗಳಿಂದಲೂ ಕರ್ನಾಟಕ, ತಮಿಳುನಾಡು ಹಾಗೂ ತೆಲಂಗಾಣ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

Tags:    

Similar News