ಪದವಿ ಪೂರೈಸಿದವರಿಗೆ ರೈಲ್ವೆ ಇಲಾಖೆಯಿಂದ ದೀಪಾವಳಿ ಬಂಪರ್‌; ಬೆಂಗಳೂರಿನಲ್ಲಿವೆ 241 ಹುದ್ದೆಗಳು

ರೈಲ್ವೆ ಇಲಾಖೆಯ ರೈಲ್ವೆ ನೇಮಕಾತಿ ಮಂಡಳಿ (RRB) ಯು ತಾಂತ್ರಿಕೇತರ 5,810 ಹುದ್ದೆಗಳ ನೇಮಕಾತಿಗಾಗಿ ಅ.21 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್‌ 20 ಕೊನೆ ದಿನಾಂಕವಾಗಿದೆ.

Update: 2025-10-22 11:44 GMT

ಸಾಂದರ್ಭಿಕ ಚಿತ್ರ

Click the Play button to listen to article

ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ  ಶಿಕ್ಷಣ ಪೂರೈಸಿದ ನಿರುದ್ಯೋಗಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ದೀಪಾವಳಿ ಹಬ್ಬಕ್ಕೆ ಭರ್ಜರಿ ಉದ್ಯೋಗ ಕೊಡುಗೆ ನೀಡಿದೆ. ಒಟ್ಟು 5,810 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ರೈಲ್ವೆ ಇಲಾಖೆಯ ರೈಲ್ವೆ ನೇಮಕಾತಿ ಮಂಡಳಿ (RRB) ಯು ತಾಂತ್ರಿಕೇತರ 5,810 ಹುದ್ದೆಗಳ ನೇಮಕಾತಿಗಾಗಿ ಅ.21 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್‌ 20 ಕೊನೆ ದಿನಾಂಕವಾಗಿದೆ.

ಪದವಿ ಮಟ್ಟದ ಹುದ್ದೆಗಳು

ಚೀಫ್‌ ಕಮರ್ಷಿಯಲ್‌ ಕಮ್‌ ಟಿಕೆಟ್‌ ಸೂಪರವೈಸರ್‌, ಸ್ಟೇಷನ್‌ ಮಾಸ್ಟರ್‌, ಗೂಡ್ಸ್ ಟ್ರೈನ್ ಮ್ಯಾನೇಜರ್, ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹಾಗೂ ಟ್ರಾಫಿಕ್‌ ಅಸಿಸ್ಟಂಟ್‌ ಸೇರಿದಂತೆ ಒಟ್ಟು 5,810 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ಅರ್ಜಿ ಸಲ್ಲಿಕೆ

ಪದವೀಧರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ರೈಲ್ವೆ ನೇಮಕಾತಿ ಮಂಡಳಿಯು ಅ.4ರಂದು ಅಧಿಸೂಚನೆ ಬಿಡುಗಡೆ ಮಾಡಿದ್ದು, ಪದವಿ ಮಟ್ಟದ ಅಭ್ಯರ್ಥಿಗಳು ನ.20 ರಂದು ಅರ್ಜಿ ಸಲ್ಲಿಸಲು ಕೊನೆ ಅವಕಾಶವಾಗಿದೆ. 

ವಯೋಮಿತಿ ಮತ್ತು ವಿಶೇಷ ಸಡಿಲಿಕೆ

ಅಭ್ಯರ್ಥಿಗಳಿಗೆ ಕನಿಷ್ಠ 21ವರ್ಷ ಮತ್ತು ಗರಿಷ್ಠ 36 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವರ್ಗವಾರು ವಯೋಮಿತಿ ಸಡಿಲಿಕೆ ಕೂಡ ಲಭ್ಯವಿದೆ. ಹಿಂದುಳಿದ ವರ್ಗಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ. ವಿಶೇಷವಾಗಿ, ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ ಎಲ್ಲಾ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಪರೀಕ್ಷಾ ವಿಧಾನ  ಮತ್ತು ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎರಡು ಹಂತದ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗಳನ್ನು 90 ನಿಮಿಷದ ಕಾಲಾವಧಿಯಲ್ಲಿ ಎದುರಿಸಬೇಕಾಗಿದ್ದು, 100 ಅಂಕ ಹಾಗೂ 120 ಅಂಕದ ಎರಡು ಪ್ರತ್ಯೇಕ ಪ್ರಶ್ನೆ ಪತ್ರಿಕೆಗಳಿರುತ್ತವೆ. ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 5,00 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ತೃತೀಯ ಲಿಂಗಿಗಳು, ಅಲ್ಪಸಂಖ್ಯಾತ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ 2,50 ರೂ. ಪರೀಕ್ಷಾ ಶುಲ್ಕ ನಿಗದಿಪಡಿಸಲಾಗಿದೆ.    

ಆಕರ್ಷಕ ವೇತನ

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ಏಳನೇ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಚೀಫ್‌ ಕಮರ್ಷಿಯಲ್‌ ಕಮ್‌ ಟಿಕೆಟ್‌ ಸೂಪರವೈಸರ್‌, ಸ್ಟೇಷನ್‌ ಮಾಸ್ಟರ್‌, ಗೂಡ್ಸ್ ಟ್ರೈನ್ ಮ್ಯಾನೇಜರ್, ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹಾಗೂ ಟ್ರಾಫಿಕ್‌ ಅಸಿಸ್ಟಂಟ್‌ ಹುದ್ದೆಗಳಿಗೆ ಮಾಸಿಕ 35,400 ರೂಪಾಯಿ ನಿಗದಿಪಡಿಸಲಾಗಿದೆ. 

ಬೆಂಗಳೂರು ವಿಭಾಗದಲ್ಲಿವೆ 241 ಹುದ್ದೆಗಳು

ಬೆಂಗಳೂರು ರೈಲ್ವೆ ವಿಭಾಗದಲ್ಲಿ ಚೀಫ್‌ ಕಮರ್ಷಿಯಲ್‌ ಕಮ್‌ ಟಿಕೆಟ್‌ ಸೂಪರವೈಸರ್‌ 10, ಸ್ಟೇಷನ್‌ ಮಾಸ್ಟರ್‌ 36, ಗೂಡ್ಸ್ ಟ್ರೈನ್ ಮ್ಯಾನೇಜರ್ 134, ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ 30, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ 31 ಸೇರಿದಂತೆ ಒಟ್ಟು 241 ಹುದ್ದೆಗಳು ಖಾಲಿ ಇವೆ.

ಅರ್ಜಿ ಸಲ್ಲಿಸುವ ವಿಧಾನ

ಅಭ್ಯರ್ಥಿಗಳು ತಮ್ಮ ಪ್ರಾದೇಶಿಕ ಆರ್‌ಆರ್‌ಬಿಯ ಅಧಿಕೃತ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಉದಾಹರಣೆಗೆ ಕರ್ನಾಟಕದ ಸ್ಪರ್ಧಾರ್ಥಿಗಳು ಬೆಂಗಳೂರು ಪ್ರಾದೇಶಿಕ ರೈಲ್ವೆ ನೇಮಕಾತಿ ಮಂಡಳಿಯ ವೆಬ್‌ಸೈಟ್‌: www.rrbbnc.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Tags:    

Similar News