Rain Alert | ಭಾರೀ ಮಳೆ ಮುನ್ಸೂಚನೆ: ಹಬ್ಬದ ಸಂಭ್ರಮಕ್ಕೆ ತಣ್ಣೀರು

Update: 2024-10-30 07:34 GMT

ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವಾರದ ಬಿಡುವಿನ ಬಳಿಕ ಮತ್ತೆ ಮಳೆ ಸುರಿಯತೊಡಗಿದೆ.

ಬೆಂಗಳೂರಿನಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು ಚಳಿ ಗಾಳಿ ಬೀಸತೊಡಗಿತ್ತು. ಈ ನಡುವೆ ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಬಸವನಗುಡಿ ಮತ್ತಿತರ ಭಾಗದಲ್ಲಿ ಅಲ್ಲಲ್ಲಿ ಮಳೆ ಕೂಡ ಸುರಿದಿದೆ.

ಹಾಗೆಯೇ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತು ಕರಾವಳಿ ಭಾಗದಲ್ಲಿ ಕೂಡ ಅಲ್ಲಲ್ಲಿ ಮಳೆಯಾದ ವರದಿಗಳಿವೆ.

ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿಈ ವಾರ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಮಳೆಯೊಂದಿಗೆ ಮಂಜು ಮತ್ತು ಚಳಿ ಕೂಡ ಇರಲಿದೆ ಎಂದು ಇಲಾಖೆ ಹೇಳಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ.

ಅದೇ ರೀತಿ ಉತ್ತರ ಒಳನಾಡು ಜಿಲ್ಲೆಗಳಲ್ಲಿ ನ.1 ಮತ್ತು 2 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ ಎಂದೂ ಹೇಳಲಾಗಿದೆ.

Tags:    

Similar News