Weather Updates | ವಾಯುಭಾರ ಕುಸಿತ: ರಾಜ್ಯದ 19 ಜಿಲ್ಲೆಗಳಲ್ಲಿ ಎರಡು ದಿನ ಮಳೆ

ಬೆಂಗಳೂರು ಸೇರಿದಂತೆ ಹಲವಡೆ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಅಲ್ಲಲ್ಲಿ ತುಂತುರು ಮಳೆಯಾಗಿದ್ದು, ಡಿ. 28 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Update: 2024-12-26 06:30 GMT

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಆರಂಭವಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ 19 ಜಿಲ್ಲೆಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ಹಲವಡೆ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಅಲ್ಲಲ್ಲಿ ತುಂತುರು ಮಳೆಯಾಗಿದ್ದು, ಡಿ. 28 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಕೊಡಗು, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಚಾಮರಾಜನಗರ, ರಾಮನಗರ, ವಿಜಯನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಸೇರಿ 19 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿ, ನಿರ್ವಾತ ಸೃಷ್ಟಿಯಾಗುತ್ತಿರುವುದರಿಂದ ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಅ.1 ರಿಂದ ಆರಂಭವಾಗಿದ್ದ ಹಿಂಗಾರು ಮಳೆ ಡಿ.31ಕ್ಕೆ ಮುಗಿಯಲಿದೆ. ಡಿ. 25ರವರೆಗೆ ರಾಜ್ಯದಲ್ಲಿ ವಾಡಿಕೆಯಂತೆ 180 ಮಿಮೀ ಮಳೆಯಾಗಬೇಕಿತ್ತು. ಆದರೆ, ಈಗಾಗಲೇ 236 ಮಿ.ಮೀ. ಮಳೆಯಾಗಿದೆ.

ಫೆಂಜಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಸತತ ಮಳೆಯಾಗಿತ್ತು. ಇದರಿಂದ ಅಪಾರ ಆಸ್ತಿಪಾಸ್ತಿ ಹಾನಿಯಾಗಿತ್ತು. ಕೊಯ್ಲಿಗೆ ಬಂದಿದ್ದ ಬೆಳೆಗಳು ಕಟಾವು ಸಾಧ್ಯವಾಗದೇ ಹಾಳಾಗಿದ್ದವು.

Tags:    

Similar News