Rain | ಇಂದಿನಿಂದ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾರಣ ಇದ್ದರೂ ಮಳೆಯ ಮುನ್ಸೂಚನೆ ಇಲ್ಲ. ಆದರೆ, ಚಂಡಮಾರುತದ ಪರಿಣಾಮಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.;

Update: 2025-04-27 05:47 GMT

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. 

ಚಂಡಮಾರುತದ ಪರಿಣಾಮ ಇಂದಿನಿಂದ(ಭಾನುವಾರ) ರಾಜ್ಯದಾದ್ಯಂತ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ,ಕೊಡಗು, ಮೈಸೂರು, ಕೋಲಾರ, ಮಂಡ್ಯ, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾರಣ ಇದ್ದರೂ ಮಳೆಯ ಮುನ್ಸೂಚನೆ ಇಲ್ಲ. ಆದರೆ, ಚಂಡಮಾರುತದ ಪರಿಣಾಮಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಹೇಳಿದೆ.

ಬಾಗಲಕೋಟೆಯ ರಬಕವಿ, ರಾಯಚೂರಿನ ಸಿಂಧನೂರು, ಚಿಂಚೋಳಿ, ಹಿರಿಯೂರು, ಬೆಳಗಾವಿ, ಜೇವರಗಿ, ಬಾದಾಮಿ, ಹುಬ್ಬಳ್ಳಿ, ರಾಯ​ಭಾಗ್, ಚಿತ್ರದುರ್ಗ, ಶಿವಮೊಗ್ಗ, ಶೃಂಗೇರಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ 34.9 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಅಕಾಲಿನ ಮಳೆಯಿಂದ ವಾತಾವರಣದಲ್ಲಿ ಬಿಸಿಲ ಧಗೆ ಹೆಚ್ಚಾಗಿದೆ. ಏಪ್ರಿಲ್‌ 27ರ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.

Tags:    

Similar News