Rain Alert | ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮತ್ತೆ ಮಳೆ
Rain Alert| ಸೋಮವಾರದಿಂದ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.;
ಶ್ರೀಲಂಕಾದ ಪೂರ್ವ ಕರಾವಳಿ ಹಾಗೂ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನವರಿ 13, 14 ರಂದು ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಕರ್ನಾಟಕ, ಉತ್ತರ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ. ವಿಜಯಪುರ, ಬೀದರ್, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಲ್ಲಿ ಮಂಜು ಕವಿದ ವಾತವರಣವಿರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಲ್ಲಿ ಕಳೆದ ಕೆಲವು ದಿನಗಳಿಂದ ಚಳಿ ತೀವ್ರವಾಗಿದೆ. ಜೊತೆಗೆ ಶುಷ್ಕ ವಾತಾವರಣವಿದೆ ಸೋಮವಾರದಿಂದ (ಜ.13,14)ರಂದು ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಸಮಯದಲ್ಲಿ ಮಂಜು/ ದಟ್ಟ ಮಂಜು ಇರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ° C ಮತ್ತು 16° C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.