ರಾಜ್ಯದ ಅಲ್ಲಲ್ಲಿ ಮಳೆ | ಏ.13ರ ವರೆಗೆ ಮಳೆ ಮುನ್ಸೂಚನೆ

ಬರ ಹಾಗೂ ಬಿಸಿಲ ಝಳದಿಂದ ತತ್ತರಿಸಿರುವ ಕರ್ನಾಟಕಕ್ಕೆ ಕೊನೆಗೂ ವರುಣ ಕೃಪೆ ತೋರಿದ್ದಾನೆ. ಬಿಸಿಲ ಝಳಕ್ಕೆ ತತ್ತರಿಸಿದ ಜನರ ಮೊಗದಲ್ಲಿ ಮಳೆಯಿಂದ ಮಂದಹಾಸ ಮೂಡಿದೆ.;

Update: 2024-04-08 05:54 GMT
ರಾಜ್ಯದಲ್ಲಿ ಮಳೆ (08-04-2024)

ಬರ ಹಾಗೂ ಬಿಸಿಲ ಝಳದಿಂದ ತತ್ತರಿಸಿರುವ ಕರ್ನಾಟಕಕ್ಕೆ ಕೊನೆಗೂ ವರುಣ ಕೃಪೆ ತೋರಿದ್ದಾನೆ. ಬಿಸಿಲ ಝಳಕ್ಕೆ ತತ್ತರಿಸಿದ ಜನರ ಮೊಗದಲ್ಲಿ ಮಳೆಯಿಂದ ಮಂದಹಾಸ ಮೂಡಿದೆ.

ಸೋಮವಾರ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು ಹಾಗೂ ಬೆಳಗಾವಿ ಸೇರಿದಂತೆ ರಾಜ್ಯದ ಒಂದೆರಡು ಕಡೆ ಭಾನುವಾರ ಮಳೆಯಾಗಿದೆ. ಮಡಿಕೇರಿಯ ತಲಕಾವೇರಿ, ಚೇರಂಗಾಲ, ಭಾಗಮಂಡಲ, ಸಣ್ಣಪುಲಿಕೋಟು ಹಾಗೂ ಅಯ್ಯಂಗೇರಿಯಲ್ಲಿ ಭಾನುವಾರ ಮಳೆಯಾಗಿದೆ. ಬೆಳಗಾವಿಯ ಖಾನಾಪುರ ಸೇರಿದಂತೆ ಕೆಲವು ಭಾಗದಲ್ಲಿ ಅರ್ಧ ತಾಸು ಮಳೆಯಾಗಿದೆ.

ಏ.13ರ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಲಾಘಾತವೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಏ.9 ಮತ್ತು ಏ.10ಕ್ಕೆ ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ  ಹಗುರ ಮಳೆಯಾಗಲಿದೆ.

ಏ.11ಕ್ಕೆ ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗಲಿದೆ .

ಏ.12ಕ್ಕೆ ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಏ.13ಕ್ಕೆ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ತಾಪಮಾನ ಮುನ್ಸೂಚನೆ

ಸೋಮವಾರದಿಂದ (ಏ.8) ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರಿನ ಪಶ್ಚಿಮ ಭಾಗದ ಜಿಲ್ಲೆಗಳಲ್ಲಿ ಬಿಸಿ ಝಳ ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳಲ್ಲಿ ಉತ್ತರ ಒಳನಾಡಿನ ಎಲ್ಲಾ ಭಾಗದಲ್ಲಿ ಮತ್ತು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಂಡ್ಯ, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ.

ಬಿಸಿಲಾಘಾತದ ಎಚ್ಚರಿಕೆ

ಸೋಮವಾರ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲಘಾತ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ನಿರ್ಮಲ ಅಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 37 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

Tags:    

Similar News