Weather Updates | ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿ.9ರವರೆಗೂ ಮಳೆ
ಫೆಂಜಲ್ ಚಂಡಮಾರುತದ ಪರಿಣಾಮ ರಾಜ್ಯದಾದ್ಯಂತ ಮಳೆಯಾಗುತ್ತಿದ್ದು, ಕರಾವಳಿ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫೆಂಜಲ್ ಚಂಡಮಾರುತ ಪರಿಣಾಮ ರಾಜ್ಯದಾದ್ಯಂತ ಮಳೆಯಾಗುತ್ತಿದ್ದು, ಕರಾವಳಿ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಇಂದು ಬೆಳಿಗ್ಗೆಯಿಂದಲೇ ಗುರುವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಿದೆ. ಗುರುವಾರ ಸಂಜೆ ಅತ್ಯಧಿಕ ಮಳೆ ಬರುವ ನಿರೀಕ್ಷೆ ಇದೆ. ಬೆಂಗಳೂರಿನ ತಾಪಮಾನದಲ್ಲಿ ವ್ಯತ್ಯಾಸವಾಗುವುದು ಮುಂದುವರಿದಿದೆ. ಸದ್ಯ ಚಳಿಯು ಸಾಮಾನ್ಯ ಪ್ರಮಾಣದಲ್ಲಿದ್ದು, ಅದು ಡಿ.10ರವರೆಗೆ ಮತ್ತಷ್ಟು ಹೆಚ್ಚಾಗುವ, ಕನಿಷ್ಠ ತಾಪಮಾನದಲ್ಲಿ ಇಳಿಕೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಸಿಂಗಸಂದ್ರ 2, ಬೇಗೂರು ಮತ್ತು ಲಕ್ಕಸಂದ್ರದಲ್ಲಿ ನಲ್ಲಿ ಅತ್ಯಧಿಕ ಮಳೆ ( ತಲಾ 23 ಮಿ.ಮೀ.) ದಾಖಲಾಗಿದೆ. ಉಳಿದಂತೆ ಸಂಪಂಗಿರಾಮನಗರ 21.5, ಮಿ.ಮೀ, ಪಟ್ಟಾಭಿರಾಮನಗರ 21.5, ಮಿ.ಮೀ, ಲಾಲ್ ಬಾಗ್ 21.5, ಮಿ.ಮೀ, ವಿವಿಪುರಂ 21.5, ಮಿ.ಮೀ, ದೊರೆಸಾನಿಪಾಳ್ಯ 21 ಮಿ.ಮೀ, ಸಾರಕ್ಕಿ 21 ಮಿ.ಮೀ, ಕುಮಾರಸ್ವಾಮಿ ಬಡಾವಣೆ 19 ಮಿ.ಮೀ, ಬಸನವಗುಡಿ 19 ಮಿ.ಮೀ, ವಿದ್ಯಾಪೀಠ 19 ಮಿ.ಮೀ, ಅರಕೆರೆ 18.5 ಮಿ.ಮೀ, ರಾಜರಾಜೇಶ್ವರಿ ನಗರ 17ಮಿ.ಮೀ, ಬಿಟಿಎಂ ಬಡಾವಣೆ 17 ಮಿ.ಮೀ. ಮಳೆ ಬಿದ್ದಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.