Rain Prediction | ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಮಳೆ !
ಕೆಲವು ಭಾಗದಲ್ಲಿ ಸಾಮಾನ್ಯಕ್ಕಿಂತ ತಾಪಮಾನ ಹೆಚ್ಚಳ;
ಇಂದಿನಿಂದ (ಮಾರ್ಚ್ 22) ರಾಜ್ಯದ ವಿವಿಧ ಭಾಗದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಯ ಅವಧಿಯಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಹಾಗೂ ಮೈಸೂರಿನಲ್ಲಿ ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗರಿಷ್ಠ ತಾಪಮಾನ ಹೆಚ್ಚಳ
ಇನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವ ನಡುವೆಯೇ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕೊಪ್ಪಳ ಮತ್ತು ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ಗ್ರಾಮಾಂತರ, ಮಂಡ್ಯ ಮತ್ತು ಮೈಸೂರು ಸೇರಿದಂತೆ ವಿವಿಧ ಭಾಗದಲ್ಲಿ ಗರಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಭಾಗದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಎರಡು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ಉಷ್ಣಾಂಶವು 35 ಮತ್ತು ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.