Weather Updates| ಏಪ್ರಿಲ್ 10ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಹಗುರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.;

Update: 2025-04-07 04:56 GMT
Weather Updates| ಏಪ್ರಿಲ್ 10ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. 

ರಾಜ್ಯದ ಕರಾವಳಿ ಜಿಲ್ಲೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಏ. 7ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಬೆಂಗಳೂರು ಮಳೆ ಹೇಗೆ?  

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ ಧಾರವಾಡ, ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಲಘು ಮಳೆ,  ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ. 

ಎಲ್ಲೆಲ್ಲಿ ಮಳೆಯಾಗಲಿದೆ? 

ಏಪ್ರಿಲ್ 8

ಕರಾವಳಿ: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಉತ್ತರ ಒಳನಾಡು: ಬೆಳಗಾವಿ, ವಿಜಯಪುರ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಲಘು ಮಳೆ / ಗುಡುಗು ಸಹಿತ ಮಳೆ ಸಂಭವ.

ದಕ್ಷಿಣ ಒಳನಾಡು: ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಲಘು ಮಳೆ ಅಥವಾ ಗುಡುಗು ಸಹಿತ ಮಳೆ.

ಉಳಿದ ಜಿಲ್ಲೆಗಳು: ಒಣಹವೆಯ ಸಾಧ್ಯತೆ.

ಏಪ್ರಿಲ್ 9

ಕರಾವಳಿ: ಕೆಲವು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ.

ಉತ್ತರ ಒಳನಾಡು: ಬೀದರ್, ಧಾರವಾಡ, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ವಿಜಯಪುರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಲಘು ಮಳೆ.

ದಕ್ಷಿಣ ಒಳನಾಡು: ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ.

ಏಪ್ರಿಲ್ 10

ಕರಾವಳಿ: ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ.

ಉತ್ತರ ಒಳನಾಡು: ವಿಜಯಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಒಂದೆರಡು ಕಡೆ ಲಘು ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಒಣಹವೆಯಿರಬಹುದು.

ದಕ್ಷಿಣ ಒಳನಾಡು: ಲಘು ಮಳೆಯಾಗುವ ಸಾಧ್ಯತೆ ಇದೆ.

Tags:    

Similar News