ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆ: ಜುಲೈ 4ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಇಂದು, ಕರಾವಳಿ ಜಿಲ್ಲೆಗಳಲ್ಲಿ (ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ) 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.;
ರಾಜ್ಯದಲ್ಲಿ ಜುಲೈ 4ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಜೂನ್ 30ರಂದು ಪ್ರಕಟವಾದ ವರದಿಯ ಪ್ರಕಾರ, ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 21°C ಇರಲಿದೆ.
ಜೂನ್ 30ರಂದು ಮಳೆ ನಿರೀಕ್ಷಿತ ಜಿಲ್ಲೆಗಳು
ಇಂದು, ಕರಾವಳಿ ಜಿಲ್ಲೆಗಳಲ್ಲಿ (ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ) 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಮುಂದಿನ ದಿನಗಳ ಹವಾಮಾನ
ಜುಲೈ 1: ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 2: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ (ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ) ಹಗುರದಿಂದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾದರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಜುಲೈ 3: ಕರಾವಳಿ ಜಿಲ್ಲೆಗಳಲ್ಲಿ ಮತ್ತಷ್ಟು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ (ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ) ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾದರೆ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.
ಜುಲೈ 4 ಮತ್ತು 5: ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ (ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ) ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾದರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.