ಹೆಚ್ಚಲಿದೆ ಮಳೆಯ ಅಬ್ಬರ, ಆರೆಂಜ್, ಯೆಲ್ಲೋ ಅಲರ್ಟ್​ ಘೋಷಣೆ

ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ತುಮಕೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.;

Update: 2024-08-14 05:49 GMT
ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
Click the Play button to listen to article

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ತುಮಕೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಸುತ್ತಮುತ್ತಲೂ ಮಧ್ಯಮ ಮಳೆಯಾಗಲಿದೆ.

ಯಾದಗಿರಿ, ಕೋಲಾರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ರಾಯಲ್ಪಾಡು, ತಾಳಿಕೋಟೆ, ಸಿಂಧನೂರು, ಮಿಡಿಗೇಶಿ, ಹುಂಚದಕಟ್ಟೆ, ಚಿಂತಾಮಣಿ, ಸೋಮವಾರಪೇಟೆ, ಪಾವಗಡ, ಪೊನ್ನಂಪೇಟೆ, ಕೂಡಲಸಂಗಮ, ಮಸ್ಕಿ, ಮುದ್ದೇಬಿಹಾಳ, ಮಧುಗಿರಿ, ಭಾಗಮಂಡಲ, ಅಡಕಿ, ಬಸವನ ಬಾಗೇವಾಡಿ, ಕೋಲಾರ, ದೊಡ್ಡಬಳ್ಳಾಪುರ, ದೇವನಹಳ್ಳಿ, ಕುಡತಿನಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಾಧಾರಣದೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕೆಲವೊಮ್ಮೆ ಬಿಸಿಲ ಧಗೆಯು ಹೆಚ್ಚಿರಲಿದೆ.

Tags:    

Similar News