ಮಳೆ ಮುನ್ಸೂಚನೆ | ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಆರೆಂಜ್‌ ಅಲರ್ಟ್

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಅ.16ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.;

Update: 2024-10-14 06:42 GMT
ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ.
Click the Play button to listen to article

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಅ.16ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಳೆಹೊನ್ನೂರು, ಕಾರ್ಕಳ, ನಂಜನಗೂಡು, ಜಯಪುರ, ಬೆಳ್ಳೂರು, ಸೋಮವಾರಪೇಟೆ, ಸರಗೂರು, ಉಪ್ಪಿನಂಗಡಿ, ಕದ್ರಾ, ಶಿರಾಲಿ, ಹಳಿಯಾಳ, ಹಾವೇರಿ, ಚಾಮರಾಜನಗರ, ಕುಶಾಲನಗರ, ನಾಪೊಕ್ಲು, ಕಮ್ಮರಡಿ, ಹುಣಸೂರಿನಲ್ಲಿ ಮಳೆಯಾಗಿದೆ. ಹಾರಂಗಿ, ಸಿದ್ದಾಪುರ, ಉಡುಪಿ, ಯಲ್ಲಾಪುರ, ಸಂಕೇಶ್ವರ, ಹಿಡಕಲ್, ಚಿಕ್ಕೋಡಿ, ಯಡವಾಡ, ಮಹಾಲಿಂಗಪುರ, ಭಾಗಮಂಡಲ, ಪೊನ್ನಂಪೇಟೆ, ಎಚ್​ಡಿ ಕೋಟೆ, ಮದ್ದೂರು, ದಾವಣಗೆರೆ, ಗುಂಡ್ಲುಪೇಟೆ, ನಾಗಮಂಗಲದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೋಮವಾರ ಬೆಳಗಿನಜಾವದಿಂದಲೇ ಗುಡುಗು ಸಹಿತ ಮಳೆಯಾಗುತ್ತಿದೆ.

Tags:    

Similar News