ರಾಜ್ಯಸಭಾ ಚುನಾವಣಾ ಮತದಾನ ಆರಂಭ: ಸುರೇಶ್ ಕುಮಾರ್ ಮೊದಲ ಮತದಾನ
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು (ಮಂಗಳವಾರ) ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದೆ. ಬಿಜೆಪಿ ಶಾಸಕ ಸುರೇಶ್ ಕುಮಾರ್ ಮೊದಲ ಮತದಾನ ಮಾಡಿದರು. ವಿಧಾನಸೌಧದ ಮೊದಲ ಮಹಡಿಯಲ್ಲಿ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು (ಮಂಗಳವಾರ) ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದೆ. ಬಿಜೆಪಿ ಶಾಸಕ ಸುರೇಶ್ ಕುಮಾರ್ ಮೊದಲ ಮತದಾನ ಮಾಡಿದರು. ವಿಧಾನಸೌಧದ ಮೊದಲ ಮಹಡಿಯಲ್ಲಿ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಬಿಜೆಪಿಯ ಸದಸ್ಯರು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು.
ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಜಯ್ ಮಾಕನ್, ಸೈಯದ್ ನಾಸಿರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಕಣದಲ್ಲಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳಾಗಿ ಬಿಜೆಪಿಯ ನಾರಾಯಣ ಸಾ ಭಾಂಡಗೆ ಮತ್ತು ಜೆಡಿಎಸ್ನ ಡಿ. ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. 223 ಶಾಸಕರು ನಾಲ್ವರು ಸದಸ್ಯರನ್ನು ಆಯ್ಕೆ ಮಾಡಬೇಕಿದೆ. ಸಂಜೆ 4ರವರೆಗೆ ಮತದಾನ ನಡೆಯಲಿದೆ. ಸಂಜೆ 5ಕ್ಕೆ ಮತಗಳ ಎಣಿಕೆ ಆರಂಭವಾಗಲಿದೆ.
ಇನ್ನು ಮತದಾನದ ಹಿನ್ನಲೆಯಲ್ಲಿ ಮೂರು ಪಕ್ಷದ ಏಜೆಂಟ್ ಗಳನ್ನು ನಿಯೋಜನೆ ಮಾಡಲಾಗಿದೆ. ಕಾಂಗ್ರೆಸ್ ಏಜೆಂಟ್ ಗಳಾಗಿ ರಿಜ್ವಾನ್ ಹರ್ಷದ್, ಯುಬಿ ವೆಂಕಟೇಶ್, ನಾರಾಯಣ ಸ್ವಾಮಿ ಇದ್ದಾರೆ. ಬಿಜೆಪಿ ಏಜೆಂಟ್ ಆಗಿ ಸುನೀಲ್ ಕುಮಾರ್ ಹಾಗೂ ಅರವಿಂದ ಬೆಲ್ಲದ ಇದ್ದಾರೆ. ಜೆಡಿಎಸ್ ಏಜೆಂಟ್ ಆಗಿ ತಿಪ್ಪೇಸ್ವಾಮಿ ಇದ್ದಾರೆ.
ಬಸ್ ನಲ್ಲಿ ಬಂದ ಕಾಂಗ್ರೆಸ್ ಶಾಸಕರು
ಅಡ್ಡ ಮತದಾನದ ಭೀತಿಯಿಂದ ಕಾಂಗ್ರೆಸ್ ನಾಯಕರು ತಮ್ಮ ಶಾಸಕರನ್ನು ರೆಸಾರ್ಟ್ ನಲ್ಲಿ ಒಟ್ಟುಗೂಡಿಸಿದ್ದರು., ಇದೀಗ ತಮ್ಮ ಅಭ್ಯರ್ಥಿಗಳ ಪರವಾಗಿ ಮತದಾನ ಮಾಡಲು ಕಾಂಗ್ರೆಸ್ ಶಾಸಕರು ಬಸ್ ನಲ್ಲಿ ಒಟ್ಟಾಗಿ ಆಗಮಿಸಿ, ಮತದಾನದಲ್ಲಿ ಭಾಗಿಯಾಗಿದ್ದಾರೆ.
ಈ ವೇಳೆ ಸಚಿವ ಎಂಬಿ ಪಾಟೀಲ್ ಮಾತನಾಡಿ, ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲುತ್ತಾರೆ. ಪಕ್ಷೇತರರು ನಮಗೆ ಬೆಂಬಲ ಕೊಡುತ್ತಿದ್ದಾರೆ. ನೀರಿಕ್ಷೇಗಿಂತ ಹೆಚ್ಚು ಮತಗಳು ಬರುತ್ತವೆ. ನಿರಾಯಸವಾಗಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ನಮ್ಮ 3 ಅಭ್ಯರ್ಥಿಗೆ 47 ಮತಗಳು ಬರುವ ನೀರಿಕ್ಷೆ ಇದೆ. ಅಡ್ಡ ಮತದಾನ ಆಗುತ್ತ ಎಂಬ ಪ್ರಶ್ನೆಗೆ, ಕಾದು ನೋಡಿ ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.